ಬಿಸಿ ಬಿಸಿ ಸುದ್ದಿ

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ

ಕಲಬುರಗಿ: ಇಂದಿನ ಆಧುನಿಕ ಒತ್ತಡ ಬದುಕಿನಲ್ಲಿ ಮಾನವ ಜೀವನ ಸಾಗಿಸುತ್ತಿದ್ದು, ಇತಿ-ಮಿತಿಯಲ್ಲಿ ಬಾಳದೇ, ತನ್ನಲ್ಲಿರುವ ಅರಿವನ್ನು ಮರೆತು ಹೋಲಿಕೆ, ಅನುಕರಣೀಯ ಸಂಸ್ಕøತಿಯನ್ನು ಅಳವಡಿಸಿಕೊಂಡು, ಕೊರೆತೆಯನ್ನು ಎದುರಿಸುತ್ತಿದ್ದಾನೆ. ಆದ್ದರಿಂದ ಪ್ರತಿಯೊಬ್ಬರು ಮತ್ತೊಬ್ಬರ ಜೊತೆ ಹೋಲಿಕೆ ಮಾಡಿಕೊಳ್ಳದೆ, ತಮ್ಮ ಸ್ವಂತ ಸಾಮಥ್ರ್ಯವನ್ನು ಅರಿತುಕೊಂಡು ಜೀವನ ಸಾಗಿಸಿದರೆ ಮಾನಸಿಕ ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆಯೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಅಭಿಪ್ರಾಯಪಟ್ಟರು.

ನಗರದ ಶಹಾಬಜಾರ ಶೇಖರೋಜಾದಲ್ಲಿರುವ ‘ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಸೋಮವಾರ ಜರುಗಿದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಆಧುನಿಕ ಜೀವನ ಶೈಲಿ, ಕೊರತೆ, ಕೌಟುಂಬಿಕ ತೊಂದರೆ, ಒತ್ತಡದ ಬದುಕು, ಮೌಢ್ಯತೆ, ಕೆಟ್ಟ ಅಭ್ಯಾಸಗಳಂತಹ ಅನೇಕ ಕಾರಣಗಳಿಂದ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾನೆ. ನಮ್ಮ ದೇಶದಲ್ಲಿ ಪ್ರತಿ 40 ಸೆಕೆಂಡಿಗೆ ಆತ್ಮಹತ್ಯೆ ಜರುಗುತ್ತಿರುವ ಸಂಗತಿ ವಿಷಾದನೀಯವಾಗಿದೆ. ಇದರಲ್ಲಿ ಶೇ.90ರಷ್ಟು ಪ್ರಕರಣಗಳು ಮನೋವ್ಯಾದಿಗಳಾಗಿವೆ. ದೇಶದ ಶೇ.10ರಷ್ಟು ಜನರು ಸಾಮಾನ್ಯ ಹಾಗೂ ಶೇ.1ರಷ್ಟು ಜನರು ತೀರ್ವತರ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮನೋರೋಗದ ಬಗ್ಗೆ ಹಿಂಜರಿಕೆಯಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ‘ಮಾನಸಿಕ ಆರೋಗ್ಯ ಕಾಯ್ದೆ-2017ರ ಸೆಕ್ಸೆನ್ 18ರ ಪ್ರಕಾರ ಎಲ್ಲರಿಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲಹೆ, ಆಪ್ತ ಸಮಾಲೋಚನೆ, ಚಿಕಿತ್ಸೆ ಪಡೆಯುವ ಹಕ್ಕನ್ನು ಹೊಂದಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಮನೋಕಾಯಿಲೆಗೆ ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಂದ ದೂರವಿರಿ. ಗೊಂದಲಕ್ಕೆ ಆಸ್ಪದ ನೀಡಬೇಡಿ. ಸತ್ಸಂಗ, ಧ್ಯಾನ, ಯೋಗ, ವ್ಯಾಯಾಮ, ಆರೋಗ್ಯಕರ ಜೀವನಶೈಲಿಯ ಅಳವಡಿಕೆ, ಸಮಸ್ಯೆಗಳ ನಿರ್ವಹಣಾ ಕೌಶಲ್ಯ ಬೆಳೆಸಿಕೊಳ್ಳುವುದು ಮನಸ್ಸನ್ನು ನಿಯಂತ್ರಣದಲ್ಲಿಡುವದು, ವಾಸ್ತವಿಕತೆಯ ಮೇಲೆ ಜೀವನ ಸಾಗಿಸುವುದು, ಮೆದುಳಿನ ಸಂಪೂರ್ಣ ಬಳಕೆ, ಸಹಾಯಹಸ್ತ ಅಗತ್ಯ, ಸೂಕ್ತ ಮಾರ್ಗದರ್ಶನದಂತಹ ಅನೇಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಾನಸಿಕ ರೋಗಕ್ಕೆ ತುತ್ತಾಗಂತೆ ತಡೆಯಲು ಸಾಧ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಪುಷ್ಪಾ ರತ್ನಹೊನ್ನದ್, ಜಗನಾಥ ಗುತ್ತೇದಾರ, ನಾಗೇಶ್ವರಿ ಮುಗಳಿವಾಡಿ, ಸಂಗಮ್ಮ ಅತನೂರ್, ರೇಶ್ಮಾ ನಕ್ಕುಂದಿ, ಗಂಗಾಜ್ಯೋತಿ ಗಂಜಿ, ಮಂಗಳಾ ಚಂದಾಪುರೆ, ಲಕ್ಷ್ಮೀ, ನಾಗಮ್ಮ, ರೇಷ್ಮಾ ನಕ್ಕುಂದಿ, ಶ್ರೀದೇವಿ, ಸಚಿನ್ ಸಿಂಗೆ ಸೇರಿದಂತೆ ಮತ್ತಿರರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago