ಬಿಸಿ ಬಿಸಿ ಸುದ್ದಿ

ಆಳಂದ: 10ನೇ ಸಮ್ಮೇಳನಾಧ್ಯಕ್ಷರಾಗಿ ಪ್ರಭುಲಿಂಗ ನೀಲೂರೆ

ಆಳಂದ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ಮೊದಲನೇ ವಾರ ಮಾಡಿಯಾಳ ಗ್ರಾಮದಲ್ಲಿ ಹಮ್ಮಿಕೊಂಡಿರುವ ಆಳಂದ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಪ್ರಭುಲಿಂಗ ನೀಲೂರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳಂದ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಖಜೂರಿ ತಿಳಿಸಿದ್ದಾರೆ.

ಮಂಗಳವಾರ ಆಳಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಸಾಹಿತಿ ಪ್ರಭುಲಿಂಗ ನಿಲೂರೆ ಅವರನ್ನು ಸರ್ವಾನುಮತದಿಂದ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಭುಲಿಂಗ ನೀಲೂರೆ ಅವರು ಮೂಲತ: ಆಳಂದ ತಾಲೂಕಿನ ಹಳ್ಳಿ ಸಲಗರ ಗ್ರಾಮದವಾರಾಗಿದ್ದರೆ. ಕಳೆದ ಎರಡು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಮಾಧ್ಯಮ ರಂಗದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ 9 ಕೃತಿಗಳನ್ನು ರಚಿಸಿ 4 ಕೃತಿಗಳನ್ನು ಸಂಪಾದಿಸಿದ್ದಾರೆ ಒಟ್ಟು 13 ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಇವರ ಅನೇಕ ಮೌಲಿಕ ಕೃತಿಗಳಿಗೆ ಕಲಬುರಗಿ ವಿಶ್ವವಿದ್ಯಾಲಯವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಸಾಹಿತ್ಯ ಪ್ರಕಾರವು ಮಕ್ಕಳ ಸಾಹಿತ್ಯ, ಕಾವ್ಯ, ನಾಟಕ, ಅನುವಾದ ಪ್ರಕಾರಗಳನ್ನು ಒಳಗೊಂಡಿವೆ ಎಂದು ತಿಳಿಸಿದ್ದಾರೆ.

ಸಮ್ಮೇಳನ ಅಚ್ಚುಕಟ್ಟಾಗಿ ಶಿಸ್ತು ಬದ್ಧವಾಗಿ ನಡೆಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಅದಕ್ಕೆ ಬೇಕಾದ ಪೂರ್ವ ಸಿದ್ಧತೆಗಳನ್ನು ತಾಲೂಕಿನ ಹಿರಿಯ ಸಾಹಿತಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿ ಮಾಡಿಕೊಳ್ಳಲಾಗಿದೆ. ತಾಲೂಕಿನ ಸಾಹಿತ್ಯ ಆಸಕ್ತರು ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೆಳನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗೌರವ ಕಾರ್ಯದರ್ಶಿ ಮಲ್ಲಿನಾಥ ತುಕ್ಕಾಣೆ ತೀರ್ಥ, ಗೌರವ ಕೋಶಾಧ್ಯಕ್ಷ ಅಶೋಕ ರೆಡ್ಡಿ ಎಲೆನಾವದಗಿ, ಪ.ಜಾ ಪ್ರತಿನಿಧಿಗಳಾದ ಹವಳಪ್ಪ ಸುಂಟನೂರ, ರಾಜಶೇಖರ ಕಡಗನ ಇಕ್ಕಳಕಿ, ಪ.ಪಂ ಪ್ರತಿನಿಧಿ ಗೋವಿಂದ ಹುಸೇನಖಾನ ನಸೀರವಾಡಿ, ವಿಶೇಷ ಆಹ್ವಾನಿತರಾದ ಯೋಗಿರಾಜ ಮಾಡ್ಯಾಳೆ, ಮಹಾಂತಪ್ಪ ನಿಂಗಶೆಟ್ಟಿ, ರಾಜೇಂದ್ರ ಭಾವಿ, ದಿನೇಶ ತಂಬದ, ವಿಶ್ವನಾಥ ಘೋಡಕೆ ಸಂಘಟನಾ ಕಾರ್ಯದರ್ಶಿಗಳಾದ ಸುಧಾಕರ ಖಂಡೇಕಾರ, ಸಂಚಾಲಕರಾದ ಮಲ್ಲಿಕಾರ್ಜುನ ವಣದೆ, ಸಂತೋಷ ಕುಂಬಾರ, ಗೌರವ ಸಲಹೆಗಾರರಾದ ಕಲ್ಯಾಣಿ ಸಾವಳಗಿ, ಮಲಿಕಾರ್ಜುನ ಬುಕ್ಕೆ ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago