ಕಲಬುರಗಿ: ಶಿಕ್ಷಕರಿಗೆ ಸನ್ಮಾನ 14 ರಂದು

0
12

ಕಲಬುರಗಿ: ಮಹಾಜನ ಫೌಂಡೇಷನ್ ಚಾರಿಟೇಬಲ್ ಮತ್ತು ವೆಲಫೇರ್ ಟ್ರಸ್ಟ್ ಹಾಗೂ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸ0ಘದ ಆಶ್ರಯದಲ್ಲಿ 14 ರಂದು ಬೆಳಗ್ಗೆ 10:30 ಗಂಟೆಗೆ ಇಲ್ಲಿನ ಆಳಂದ ರಸ್ತೆಯ ಎನ್.ಜೆ. ಕಲಬುರಗಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕøತರಿಗೆ, ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶ ಹೂಗಾರ ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಉದ್ಘಾಟಿಸುವವರು. ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅಧ್ಯಕ್ಷತೆ ವಹಿಸುವರು. ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಸತ್ಕರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here