ಬಿಸಿ ಬಿಸಿ ಸುದ್ದಿ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಕರಡು ಮರುಮಂಡಿಸಿ: ಡಾ.ಟಿ.ಎಸ್ ನಾಗಾಭರಣ ಒತ್ತಾಯ

ಬೆಂಗಳೂರು: ಕನ್ನಡ ಆಶಯಗಳನ್ನು ನಾಡಿನಲ್ಲಿ ಅನುಷ್ಠ್ಠಾನಗೊಳಿಸುವುದಕ್ಕೆ ಕನ್ನಡ ಬದ್ಧತೆಯುಳ್ಳ ಮನಸ್ಸುಗಳು ಅತ್ಯಂತ ಮುಖ್ಯವಾಗಿದ್ದು,ಈ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಿದ್ದಪಡಿಸಿ ಸಲ್ಲಿಸಿದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಕರಡÀನ್ನು ಯಥಾವತ್ತಾಗಿಯೇ ಮಂಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್. ನಾಗಾಭರಣ ಅವರು ಮನವಿ ಮಾಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಂತರ ತಮ್ಮ ಕಾಲಾವಧಿಯಲ್ಲಿ ಮಾಡಿದ ಕನ್ನಡ ಕಾಯಕಗಳ ಕುರಿತು ವಿಧಾನಸೌಧದಲ್ಲಿರುವ ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕನ್ನಡ ಆಶಯಗಳನ್ನ ಎಲ್ಲೆಡೆ ಪಸರಿಸುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದ ಕರಡನ್ನು ಸಮಗ್ರವಾಗಿ ಎಲ್ಲ ರೀತಿಯಿಂದಲೂ ಅಧ್ಯಯನ ನಡೆಸಿ ಸಿದ್ದಪಡಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಕಳುಹಿಸಿಕೊಡಲಾಗಿತ್ತು; ಅದರಲ್ಲಿ ಕೆಲವು ಬದಲಾವಣೆಗಳೊಂದಿಗೆ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿದೆ. ಅದರಲ್ಲಿ ಕನ್ನಡ ಭಾಷೆಯ ಅನುಷ್ಠಾನಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಜಾರಿ ಪ್ರಾಧಿಕಾರಗಳಾಗಿ ಕಾರ್ಯನಿರ್ವಹಿಸತಕ್ಕದ್ದು ಎಂದು ನಮ್ಮ ಕರಡುವಿನಲ್ಲಿ ತಿಳಿಸಲಾಗಿತ್ತು.

ಅದನ್ನು ಕೈಬಿಡುವುದರ ಮೂಲಕ ಪ್ರಾಧಿಕಾರದ ಅಧಿಕಾರ ಅಂದರೇ ಸ್ವಾಯತ್ತತೆಯನ್ನು ಮೊಟಕುಗೊಳಿಸಲಾಗಿದೆ;ಇದು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಅವರು ಈ ಕುರಿತು ಪ್ರಾಧಿಕಾರ ಸಿದ್ದಪಡಿಸಿದ ಕರಡನ್ನು ಯಥಾವತ್ತಾಗಿ ಮಂಡಿಸಿ ಬರುವ ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆಯಾಗಬೇಕು;ಇದು ನನ್ನ ಕನಸು ಎಂದರು.

ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇದುವರೆಗೆ 87 ಪರಿಶೀಲನಾ ಸಭೆ ನಡೆಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲಿಸಲಾಗಿದೆ.ಕನ್ನಡ ಅನುಷ್ಠಾನ ವಿಷಯದಲ್ಲಿ ಉದಾಸೀನತೆ ತೋರಿದ 180 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ವಿವರಿಸಿದ ಅವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿದರೂ ಕ್ರಮಗಳಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು ಮತ್ತು ಬದ್ಧತೆ ಇರದಿದ್ದರೇ ಕನ್ನಡ ಅನುಷ್ಠಾನ ಕಷ್ಟವಾಗಲಿದೆ ಎಂದರು.

ಕನ್ನಡ ಕಾಯಕ ವರ್ಷದ ಅಂಗವಾಗಿ ಬ್ಯಾಂಕ್‍ಗಳ ಕನ್ನಡ ಅಭಿಯಾನ,ಮಾಧ್ಯಮಗಳಲ್ಲಿ ಕನ್ನಡ ಅಭಿಯಾನ,ನ್ಯಾಯಾಲಯದಲ್ಲಿ ಕನ್ನಡ ಅಭಿಯಾನ, ಗ್ರಾಹಕ ಸೇವೆಗಳಲ್ಲಿ ಕನ್ನಡ,ವೈದ್ಯಕೀಯ ವಲಯದಲ್ಲಿ ಕನ್ನಡ ಸೇರಿದಂತೆ ವಿವಿಧ ರೀತಿಯ ಅಭಿಯಾನಗಳನ್ನು ಮಾಡಲಾಗಿದೆ; ಎಲ್ಲ ಅಭಿಯಾನಗಳಿಂದಲೂ ಅಭೂತಪೂರ್ವ ಪ್ರಕ್ರಿಯೆ ದೊರಕಿದೆ ಎಂದು ಅವರು ಹೇಳಿದರು.

ಕನ್ನಡ ಕಾಯಕ ವರ್ಷದ ಅಭಿಯಾನದಡಿ ಬಹಳಷ್ಟು ಕೆಲಸಗಳನ್ನು ನಮ್ಮ ಪ್ರಾಧಿಕಾರ ಮಾಡಿದೆ ಎಂದು ಹೇಳಿದ ಅವರು 50 ಪ್ರಕಟಣೆಗಳನ್ನು ಹೊರತರಲಾಗಿದೆ. ನಮ್ಮ ಪ್ರಾಧಿಕಾರದಿಂದ ಹೊರತರಲಾದ ಪುಸ್ತಕಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಕೂಡ ಅಳವಡಿಸಲಾಗಿದ್ದು,ಪುಸ್ತಕ ಓದಲು ಸಾಧ್ಯವಾಗದವರು;ತಂತ್ರಜ್ಞಾನದ ಮೂಲಕ ಆಲಿಸಬಹುದಾಗಿದೆ ಎಂದರು.

ತಂತ್ರಜ್ಞಾನ ಬಳಸಿಕೊಂಡು ಮಕ್ಕಳ ಬೆಳವಣಿಗೆಗೆ ಪೂರಕವಾಗುವ ಅನೇಕ ಪ್ರಕಟಣೆಗಳನ್ನು ಹೊರತರಲಾಗಿರುವುದನ್ನು ಸಹ ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

ಕನ್ನಡ ಕಾಯಕ ವರ್ಷ, ಕಾಯಕ ವರ್ಷದ ಅಂಗವಾಗಿ ನಡೆಸಿದ ಅಭಿಯಾನಗಳು, ನಾಗನಾಥಪುರದಲ್ಲಿನ ಭಾಷ್ ಸಂಸ್ಥೆಯ ಕಾರ್ಮಿಕರ ಸಮಸ್ಯೆಗೆ ಪರಿಹಾರ, ಅನಿವಾಸಿ,ಹೊರನಾಡು-ಗಡಿನಾಡು ಕನ್ನಡಿಗರು, ಕಾಸರಗೋಡಿನ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಅಲ್ಲಿನ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಿಸುವುದು ಸೇರಿದಂತೆ ತಮ್ಮ ಅವಧಿಯಲ್ಲಿ ಮಾಡಿದ ಕನ್ನಡ ಕಾಯಕಗಳನ್ನು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ ಮತ್ತಿತರರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

9 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

9 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

9 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

9 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

10 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

11 hours ago