ಬಿಸಿ ಬಿಸಿ ಸುದ್ದಿ

ಬೌದ್ಧ ಧರ್ಮಕ್ಕೆ ಬರಲು ಬಲವಂತ ಇಲ್ಲ | ಮೀಸಲು ಸೌಲಭ್ಯ ಹೋಗಲ್ಲ; ಹೆಗ್ಗಡೆ

ಸುರಪುರ: ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಹಾಗೂ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟ ದಿಂದ ಇದೇ ಅಕ್ಟೋಬರ್ 14 ರಂದು ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಲಾಯಿತು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಟ್ರಸ್ಟ್ ಖಜಾಂಚಿ ದೇವೆಂದ್ರ ಹೆಗ್ಗಡೆ ಮಾತನಾಡಿ,1956ರ ಅಕ್ಟೋಬರ್ 14 ರಂದು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿದ ದಿನದ ಅಂಗವಾಗಿ ವರಜ್ಯೋತಿ ಬಂತೇಜಿಯವರ ಸಾನಿಧ್ಯದಲ್ಲಿ ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿಯೂ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಯಲಿದ್ದು,ಬೌದ್ಧ ಧವರ್i ಸ್ವೀಕರಿಸುವ ಆಸಕ್ತಿ ಇರುವವರು ಸ್ವೀಕರಿಸಬಹುದು ಆದರೆ ಯಾರಿಗೂ ಬಲವಂತ ಮಾಡುವುದಿಲ್ಲ,ಸ್ವಿಚ್ಛೆಯಿಂದ ಧರ್ಮ ಸ್ವೀಕರಿಸುವವರಿಗೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಬೌದ್ಧ ಧರ್ಮ ಸ್ವೀಕಾರದ ಎಲ್ಲಾ ಕಾರ್ಯಕ್ರಮ ಬೌಧ್ಧ ಬಿಕ್ಕುಗಳ ಸಂಘದಿಂದ ನಡೆಯಲಿದ್ದು ಕಾರ್ಯಕ್ರಮದಲ್ಲಿ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗಳಾದ ರಮಾತಾಯಿ ಅಂಬೇಡ್ಕರ್ ಅವರು ಹಾಗೂ ಅನೇಕ ಜನ ಬಂತೇಜಿಗಳು ಭಾಗವಹಿಸಲಿರುವ ಕಾರ್ಯಕ್ರಮವನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಲಿದ್ದಾರೆ ಮತ್ತು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ನಾಡಿನ ವಿವಿಧ ದಲಿತಪರ ಸಂಘಟನೆಗಳ ರಾಜ್ಯ ಮತ್ತು ಜಿಲ್ಲಾ ಸಂಚಾಲಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎರಡೂ ತಾಲೂಕಿನ ಬಹುತೇಕ ಎಲ್ಲಾ ಗ್ರಾಮಗಳಲ್ಲಿರುವ ಜನರಿಗೆ ಕಾರ್ಯಕ್ರಮದ ಕುರಿತು ಪ್ರಚಾರ ರಥದ ಮೂಲಕ ಮಾಹಿತಿಯನ್ನು ನೀಡಲಾಗಿದ್ದು,ಬೌದ್ಧ ಧರ್ಮ ಸ್ವೀಕರಿಸುವ ಆಸಕ್ತರು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊಟ್ಟಲ್ಲಿ,ಅವರಿಗೆ ಅವಕಾಶ ನೀಡಲಾಗುವುದು.ಅಲ್ಲದೆ ಧರ್ಮ ಸ್ವೀಕರಿಸಿದವರಿಗೆ ದೃಢಿಕರಣ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ತಿಳಿಸಿದರು.ಅಲ್ಲದೆ ಅನೇಕರಿಗೆ ಬೌದ್ಧ ಧವರ್i ಸ್ವೀಕಾರದಿಂದ ಈಗಿರುವ ಮೀಸಲಾತಿ ಸೌಲಭ್ಯ ಹೋಲಿದೆಯಾ ಎನ್ನುವ ಅನುಮಾನಗಳಿರುವ ಬಗ್ಗೆ ಗಮನಕ್ಕೆ ಬಂದಿದ್ದು ಯಾವುದೇ ರೀತಿಯ ಸೌಲಭ್ಯಗಳು ಹೋಗುವುದಿಲ್ಲ.ಬೌದ್ಧ ಧರ್ಮ ಸ್ವೀಕರಿಸಿದವರ ಪ್ರಮಾಣ ಪತ್ರಗಳಲ್ಲಿನ ಧರ್ಮದ ಕಾಲಂನಲ್ಲಿ ಹಿಂದು ಬದಲಾಗಿ ಬೌದ್ಧ ಎಂದು ಬರಲಿದ್ದು,ಜಾತಿ ಕಾಲಂನಲ್ಲಿ ಈಗಿರುವ ಜಾತಿಯೇ ಇರಲಿದ್ದು ಇದರಿಂದ ಯಾವುದೇ ಸೌಲಭ್ಯ ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಅಧ್ಯಕ್ಷ ವೆಂಕಟೇಶ ಹೊಸ್ಮನಿ ಹಾಗೂ ಪದಾಧಿಕಾರಿಗಳಾದ ನಾಗಣ್ಣ ಕಲ್ಲದೇವನಹಳ್ಳಿ,ಭೀಮರಾಯ ಸಿಂದಗೇರಿ,ಆದಪ್ಪ ಹೊಸ್ಮನಿ,ರಾಹುಲ್ ಹುಲಿಮನಿ,ಮಾಳಪ್ಪ ಕಿರದಳ್ಳಿ,ಗೋಪಾಲ ವಜ್ಜಲ್,ವೆಂಕಟೇಶ ಸುರಪುರ,ಹಣಮಂತ ಹೊಸ್ಮನಿ,ವೀರಭದ್ರ ತಳವಾರಗೇರ,ಹುಲಗಪ್ಪ ದೇವತ್ಕಲ್,ಶಿವಶಂಕರ ಹೊಸ್ಮನಿ,ಬಸವರಾಜ ಬಡಿಗೇರ,ಮಲ್ಲು ಕೆ.ಸಿ.ಪಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago