ಬಿಸಿ ಬಿಸಿ ಸುದ್ದಿ

ಶಹಾಬಾದ: ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಆಗ್ರಹ

ಶಹಾಬಾದ: ನಗರದ ಜಿಇ ಕಾಲೋನಿಯಲ್ಲಿ ಅನೇಕ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಎಬಿಬಿ-ಎಬಿಎಲ್ ಸ್ವಯಂ ನಿವೃತ್ತಿ ನೌಕರರ ಸಂಘದವರು ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿ ಯಶವಂತ.ವಿ.ಗುರುಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಗರದ ಜಿಇ ಕಾರ್ಖಾನೆಯವರು ಈಗಾಗಲೇ ಕಾಲೋನಿಯ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ.ಆದರೆ ಅದು ಮಣ್ಣು ಮಿಶ್ರಿತದಿಂದ ಕೂಡಿದ್ದು, ಕುಡಿಯಲು ಯೋಗ್ಯವಿಲ್ಲ.ಈ ಸಂಬಂಧ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವರಿಕೆ ಮಾಡಿದ್ದೆವೆ.ಅವರು ಸ್ಪಂದಿಸಿ ಕುಡಿಯುವ ನೀರಿನ ಶುದ್ಧಿಕರಣ ಘಟಕ ಮಂಜೂರು ಮಾಡಿದ್ದಾರೆ.ಆದರೆ ವರ್ಷವಾದರೂ ಕೆಲಸ ಪ್ರಾರಂಭವಾಗಿಲ್ಲ. ಅಲ್ಲದೇ ಕಾಲೋನಿಯಲ್ಲಿ ಯಾರಾದರೂ ಸಾವನಪ್ಪಿದರೆ ರುದ್ರಭೂಮಿಗೆ ಹೋಗಲು ಸುಮಾರು 3 ಕಿಮೀ ದೂರವಾಗುತ್ತದೆ.ಆದ್ದರಿಂದ ಶವ ಸಾಗಿಸಲು ವೈಕುಂಠ ರಥದ ವ್ಯವಸ್ಥೆ ಮಾಡಬೇಕು.ಅದನ್ನು ನೋಟಿಫೈಡ್ ಏರಿಯಾಗೆ ಮಂಜೂರು ಮಾಡಿಸಬೇಕು. ಬೀದಿದೀಪಗಳ ಸಮಸ್ಯೆಯಿದ್ದು, ಈ ಬಗ್ಗೆ ಅಧಿಸೂಚಿತ ಕ್ಷೇತ್ರ ಸಮಿತಿಯ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ದೂರಿದರು. ಕಾಲೋನಿಯಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ.

ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ಮಾಡುತ್ತಿಲ್ಲ. ಫಾಗಿಂಗ್ ಮಾಡಲು ಮಶಿನ್ ಇಲ್ಲ ಎಂದು ಹೇಳುತ್ತಿದ್ದಾರೆ.ಕೂಡಲೇ ಅಧಿಸೂಚಿತ ಕ್ಷೇತ್ರ ಸಮಿತಿಗೆ ಫಾಗಿಂಗ್ ಯಂತ್ರ ಪೂರೈಸಬೇಕು. ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಟ್ಟದಿಂದ ಮಾಡಲಾಗಿದೆ.ಅಲ್ಲದೇ ಬಹುತೇಖ ಕಡೆಗಳಲ್ಲಿ ಪೈಪ್ ಕನೆಕ್ಷನ್ ಮಾಡಿಲ್ಲ. ಕಾಮಗಾರಿ ಮಾಡದೇ ಗುತ್ತಿಗೆದಾರ ಬಿಟ್ಟು ಹೋಗಿದ್ದಾರೆ.ಈ ಬಗ್ಗೆ ಕ್ರಮಕೈಗೊಳ್ಳಬೇಕು.ಅಲ್ಲದೇ ಜಿಇ ಕಾಲೋನಿಯ ಮುಂಭಾಗದಲ್ಲಿ ಬಸ್ ತಂಗುದಾಣವಿತ್ತು.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಅದನ್ನು ತೆಗೆದು ಹಾಕಲಾಗಿದೆ.ಸುಮಾರು ವರ್ಷಗಳಿಂದ ಇಲ್ಲಿನ ಜನರು ಬಿಸಿಲು, ಮಳೆಯಿಂದ ತೊಂದರೆಗೆ ಈಡಾಗುತ್ತಿದ್ದಾರೆ.ಆದ್ದರಿಂದ ಕೂಡಲೇ ಬಸ್ ತಂಗುದಾಣ ನಿರ್ಮಿಸಬೇಕು. ಕಾಲೋನಿಯಲ್ಲಿ ಹಂದಿ-ನಾಯಿಗಳ ಕಾಟ ಹೆಚ್ಚಾಗಿದೆ. ಅವುಗಳನ್ನು ಸ್ಥಳಾಂತರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಎಬಿಬಿ-ಎಬಿಎಲ್ ಸ್ವಯಂ ನಿವೃತ್ತಿ ನೌಕರರ ಸಂಘದ ದೇವೆಂದ್ರ ಗಾಯಕವಾಡ,ರಾಮಲಿಂಗಪ್ಪ ಮಾಕಾ, ಶಿವಶರಣಪ್ಪ ಜೆಟ್ಟೂರ್, ವಿನೋದ ಹಾಗರಗಿ,ವೆಂಕಟೇಶ ಚವ್ಹಾಣ,ಭೀಮಾಶಂಕರ ದಂಡೋತಿ,ಸೋಮಶೇಖರ ಉಳ್ಳಾಗಡ್ಡಿ, ಉಮೇಶ ತರನ್‍ಕರ್, ಶರಣು ಪಡಶೆಟ್ಟಿ ಇತರರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

7 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

7 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

9 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 hours ago