ಕಲಬುರಗಿ: ಗ್ರಾಮೀಣ ಜನರ ಹತ್ತು-ಹಲವಾರು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಪರಿಕಲ್ಪನೆಯಡಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಕ್ಟೋಬರ್ 15 ರಂದು ಶನಿವಾರ ಅಫಜಲಪೂರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಂದು ಜಿಲ್ಲಾಧಿಕಾರಿಗಳು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ಗ್ರಾಮದಲ್ಲಿಯೆ ಇದ್ದು, ಗ್ರಾಮದ ಜನರ ಅಳಲನ್ನು ಆಲಿಸಿ ಗ್ರಾಮದಲ್ಲಿಯೇ ಗ್ರಾಮ ವಾಸ್ತವ್ಯ ಮಾಡುವರು. ಜಿಲ್ಲಾಧಿಕಾರಿಗಳೊಂದಿಗೆ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಅಫಜಲಪೂರ ತಾಲೂಕು ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿರಲಿದ್ದಾರೆ.
ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಆಕಾರಬಂದ್ ತಾಳೆಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು, ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ ನಂ. 3 ಮತ್ತು ಕಾಲಂ ನಂ. 9 ತಾಳೆ ಹೊಂದುವಂತೆ ಸೂಕ್ತ ಆದೇಶಗಳನ್ನು ಹೊರಡಿಸುವುದು. ಗ್ರಾಮದಲ್ಲಿ ಪೌತಿ (ಮರಣ) ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ವಹಿಸಲಾಗುವುದು.
ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಹಾಗೂ ಬಿಟ್ಟು ಹೊದಂತಹ ಅರ್ಹ ಪ್ರಕರಣಗಳ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವುದು. ಗ್ರಾಮದಲ್ಲಿ ಸ್ಮಶಾನ ಭೂಮಿ ಲಭ್ಯತೆಯ ಬಗ್ಗೆ ಪರಿಶೀಲಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸಲಾಗುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು. ಆಧಾರ್ ಕಾರ್ಡಿನ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಆನ್‍ಲೈನ್ ಮುಖಾಂತರ ಸಂಬಂಧಪಟ್ಟ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ.
ಅದೇ ರೀತಿ ಮತದಾರರ ಪಟ್ಟಿ ಪರಿಷ್ಕರಣೆ, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು. ಅತೀವೃಷ್ಟಿ/ಅನಾವೃಷ್ಟಿ ಎದುರಿಸಲು ಮುಂಜಾಗೃತೆ ಕ್ರಮ ಕೈಗೊಳ್ಳುವುದು, ಜಮೀನಿನ ಹದ್ದು ಬಸ್ತು, ಪೆÇೀಡಿ, ಪೆÇೀಡಿ ಮುಕ್ತಗ್ರಾಮ, ದರಕಾಸ್ತು ಪೆÇೀಡಿ (ನಮೂನೆ-1-5 ಮತ್ತು ನಮೂನೆ 6-10ನ್ನು, ಭರ್ತಿ ಮಾಡಿ ದರಕಾಸ್ತು ಪೆÇೀಡಿ ಮಾಡುವುದು), ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿರುವ ಸರ್ಕಾರಿ ವಸತಿ ನಿಲಯ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು, ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು, ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಕುರಿತು ಕ್ರಮ ಕೈಗೊಳ್ಳುವುದು, ಗ್ರಾಮದಲ್ಲಿಯ ಇತರೆ ಕುಂದುಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಕೋವಿಡ್-19 ರ ಸುರಕ್ಷತಾ ಕ್ರಮಗಳ ಬಗ್ಗೆ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಿರುವ ಸುತ್ತೋಲೆ/ಆದೇಶಗಳನ್ನು ಪಾಲಿಸುವ ಕುರಿತು ಅರಿವು ಮೂಡಿಸಲಾಗುತ್ತದೆ.
ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಲು ಡಿ.ಸಿ.ಮನವಿ: ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಜನರ ಮನೆ ಬಾಗಿಲಿಗೆ ಬರುತ್ತಿರುವುದರಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಜಿಲ್ಲೆಯ ಆಯಾ ಗ್ರಾಮದ ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಬಂದು ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಸಾಂಸ್ಕøತಿಕ ಕಾರ್ಯಕ್ರಮ: ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಂಸ್ಕøತಿಕ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ.
ತಹಶೀಲ್ದಾರರಿಂದಲೂ ಗ್ರಾಮ ವಾಸ್ತವ್ಯ: ಕಲಬುರಗಿ ಜಿಲ್ಲಾಧಿಕಾರಿಗಳು ಅಫಜಲಪೂರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅದೇ ರೀತಿ ಉಳಿದಂತೆ ಸೇಡಂ ತಾಲೂಕಿನ ಸಿಂಧನಮಡು, ಕಾಳಗಿ ತಾಲೂಕಿನ ವಜೀರಗಾಂವ, ಆಳಂದ ತಾಲೂಕಿನ ಮುನ್ನಳ್ಳಿ, ಕಮಲಾಪೂರ ತಾಲೂಕಿನ ಗೋಗಿ(ಕೆ), ಶಹಾಬಾದ ತಾಲೂಕಿನ ಹೊನಗುಂಟಾ, ಚಿತ್ತಾಪುರ ತಾಲೂಕಿನ ತೋನಸನಹಳ್ಳಿ(ಟಿ), ಚಿಂಚೋಳಿ ತಾಲೂಕಿನ ರುದನೂರ, ಯಡ್ರಾಮಿ ತಾಲೂಕಿನ ಶಿವಪೂರ, ಜೇವರ್ಗಿ ತಾಲೂಕಿನ ಜೈನಾಪೂರ ಹಾಗೂ ಕಲಬುರಗಿ ತಾಲೂಕಿನ ಕಡಣಿ ಗ್ರಾಮಗಳಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಗ್ರಾಮ ವಾಸ್ತವ್ಯ ಮಾಡುವುದರ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಿದ್ದಾರೆ.
ಕಂದಾಯ ಇಲಾಖೆಯ ಇತರೆ ಅಧಿಕಾರಿಗಳಾದ ಭೂದಾಖಲೆಗಳ ಉಪನಿರ್ದೇಶಕರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಉಪವಿಭಾಗದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ನಿಗದಿಪಡಿಸಿದ ಗ್ರಾಮಗಳಲ್ಲಿ ಮೇಲ್ಕಂಡ ದಿನದಂದು ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…