ಹೈದರಾಬಾದ್ ಕರ್ನಾಟಕ

ನಿರುದ್ಯೋಗ, ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಆಫ್ ಇಂಡಿಯಾದಿಂದ ಜನ ಜಾಗೃತಿ ಜಾಥಾ

ಕಲಬುರಗಿ: ನಿರುದ್ಯೋಗ, ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಅ.15 ರಿಂದ ಜನಜಾಗೃತಿ ಜಾಥಾಕ್ಕೆ ಜನ ಜಾಗೃತಿ ಜಾತವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್ ಅವರು ಚಾಲನೆ ನೀಡಿದರು.

ನಗರದ ಜಗತ್ ಸರ್ಕಲ್ ಬಳ್ಳಿ ಉದ್ಘಾಟನಾ ಸಮಾರಂಭವನ್ನು ಮಾಡಲಾಯಿತು. ನಂತರ ಜಗತ್ ಸರ್ಕಲ್ ಇಂದ ತಿಮ್ಮಪೂರಿ ಸರ್ಕಲ್ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು. ನಮ್ಮ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದುರಿವೆ, ಅದರಲ್ಲಿ ಬಹುಮುಖ್ಯವಾಗಿ ಬೆಲೆ ಏರಿಕೆ ಮತ್ತು ನಿರುದ್ಯೋಗ, ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ನರಕ ಆಗಿದೆ,ಬಡಜನರು ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ.

ಬೆಲೆ ಏರಿಕೆ ಮತ್ತು ನಿರುದ್ಯೋಗದ ಕುರಿತು ಅಕ್ಟೋಬರ್ 15 ರಿಂದ 31ರವರೆಗೆ *ದೇಶದೆಲ್ಲಡೆ ಹಾಹಾಕಾರ-ನಿರುದ್ಯೋಗ ಬೆಲೆ ಏರಿಕೆಗೆ ಎಂದು ಪರಿಹಾರ* ಎಂಬ ಘೋಷವ್ಯಾಖ್ಯಾ ದೊಂದಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದೇಶಾದ್ಯಂತ ಒಂದು ಆಂದೋಲನ ಹಮ್ಮಿಕೊಂಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ ಅರಮೋಘಮ್ ಹೇಳಿದರು.

ಆಂದೋಲನದ ಸಂಧರ್ಭದಲ್ಲಿ ಕಲ್ಯಾಣ ಕರ್ನಾಟಕದ ಹೃದಯ ವಾದ ಕಲಬುರ್ಗಿ ದಿಂದ ಮಂಗಳೂರಿನವರೆಗೆ ಒಂದು ಜನ ಜಾಗೃತಿ ಜಾಥಾ ನಡೆಯುವುದು ಎಂದು ಹೇಳಿದರು.

ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಬಿಕ್ಕಟ್ಟು ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಕೂಡಲೇ ಪರಿಹಾರ ಕ್ರಮ ತೆಗೆದುಕೊಳ್ಳಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ತೆ ನೀಡಬೇಕು. ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಬಡವರಿಗೆ ಅವರ ಖರೀದಿ ಸಾಮಥ್ರ್ಯವನ್ನು ಸಕ್ರೀಯಗೊಳಿಸಲು ಹಣ ನೀಡಬೇಕು. ಎಲ್ಲಾ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಉಚಿತ ಸಿಲಿಂಡರ್ ಮತ್ತು ಸಬ್ಸಿಡಿ ರಿಫಿಲ್ ಸಿಲಿಂಡರ್ ಗಳು ನೀಡಬೇಕು.

ಅಪೌಷ್ಟಿಕತೆ ಮತ್ತು ಹಸಿವು ತಡೆಯಲು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅನ್ನ ರೋಜ್ಗಾರ್ ಯೋಜನೆ ಮುಂದುವರೆಸಬೇಕು. ಅಸಂಘಟಿತ ವಲಯಗಳನ್ನು ಸಂಘಟಿಸಬೇಕು ಮತ್ತು ಭದ್ರತೆಗಳನ್ನು ನೀಡಬೇಕು. ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ಮತ್ತು ಭದ್ರತೆ ನೀಡಬೇಕು. ಕಾಳ ಸಂತೆ ಮತ್ತು ಭ್ರಷ್ಟಾಚಾರವನ್ನು ತಡೆಯಲು ಸೂಕ್ತ ಕಾನೂನು ಜಾರಿಗೊಳಿಸಬೇಕು ಸೇರಿ ಇತರೆ ಬೇಡಿಕೆಗಳ ಈಡೇರಿಕೆಗೆ ಈ ಆಂದೋಲನ ದ ಸಂದರ್ಭದಲ್ಲಿ ಆಗ್ರಹಿಸಿಲಾಗುವುದು.

ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಮುಂದಾಗಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಆಂದೋಲನ ಎಲ್ಲರೂ ಕೈಜೋಡಿಸುವ ಮೂಲಕ ಯಶಸ್ವಿಗೊಳಿಸಬೇಕು. ಜಾಥಾ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಪತ್ರಿಕಾಗೋಷ್ಠಿ, ಬೀದಿ ನಾಟಕಗಳ ಮೂಲಕ ಜನ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತದೆ. ಜನಕಲ್ಯಾಣ ಬಿಟ್ಟು ಸ್ವಾರ್ಥದಲ್ಲಿ ಮುಳುಗಿರುವ ಸರಕಾರಕ್ಕೆ ಎಚ್ಚರಿಕೆ ನೀಡಲು ನಮ್ಮೊಂದಿಗೆ ಕೈಜೋಡಿಸಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹೇರ್ ಹುಸೇನ್ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ: ಮುಸ್ಲಿಂ ಲೀಗ್ ಪಕ್ಷದ ಮುಖಂಡರು ನು ಮೊಲನ ,ರಾಜ್ಯ ಕಾರ್ಯದರ್ಶಿಗಳಾದ ಆದಿಲ್ ಪಟೇಲ್,  ಮುಜಾಹಿದ್ ಪಾಷಾ ಖುರೇಶಿ, ಅಜೀಜ್ ಜಾಗೀರ್ದಾರ್, ಜಿಲ್ಲಾಧ್ಯಕ್ಷ ಮುಬೀನ್ ಅಹಮದ್, ಅಜೀಜ್ ಪಟೇಲ್, ಸಲೀಂ ಚಿತಾಪೂರಿ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago