ಕಲಬುರಗಿ: ನಾಡಿನಯುವ ಸಮುದಾಯ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಂಡು ದೇಶದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಸೂಚಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅಭಿಪ್ರಾಯಪಟ್ಟರು. ಅವರು ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನಕಾಲೇಜಿನಲ್ಲಿ ಕರ್ನಾಟಕರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತುತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಮಾಜಿ ಶಾಸಕಿ ಅರುಣಾ ಪಾಟೀಲ ಸಿ.ರೇವೂರ ಅವರು ಮಾತನಾಡಿ ವಿದ್ಯಾರ್ಥಿಗಳು ಶ್ರಮವಹಿಸಿ ವಿವಿಧ ಮಾಧರಿ ತಯಾರಿಸಿ ಆ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರ ಸೂಚಿಸುತ್ತಿರುವುದು ಸಂತಸದ ಸಂಗತಿ. ಕಲ್ಯಾಣಕರ್ನಾಟಕದಲ್ಲಿ ಇಂತಹ ಕಾರ್ಯಕ್ರಮ ಆಯೋಜನೆಗೊಂಡಿರುವುದು ಉತ್ತಮ ಬೆಳವಣಿಗೆ ಎಂದರು.
ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದಗುಲ್ಬರ್ಗ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ|| ದಯಾನಂದಅಗಸರ ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಷೇತ್ರದಲ್ಲಾದ ಸಂಶೋಧನೆಗಳು ಮನುಕುಲದ ಒಳಿತಿಗಾಗಿಯೇ ಇವೆ. ನಾಡಿನಜನತೆಎಚ್ಚರಿಕೆಯಿಂದ ಇವುಗಳ ಸಮರ್ಪಕ ಬಳಕೆ ಮಾಡಿಕೊಳ್ಳಬೇಕು ಎಂದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯಾಧ್ಯಕ್ಷ ಗಿರೀಶ ಕಡ್ಲೇವಾಡ ಮಾತನಾಡಿ ಪದವಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಅಳವಡಿಸಿಕೊಂಡು ಭವಿಷ್ಯದ ವಿಜ್ಞಾನಿಗಳಾಗಿ ರೂಪಗೊಳ್ಳಬೇಕು ಎಂದರು.
ವೇದಿಕೆಯ ಮೇಲೆ ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹದ ಮುಖ್ಯ ಶೈಕ್ಷಣಿಕ ನಿರ್ದೇಶಕಅಭಿಷೇಕ ಪಾಟೀಲ, ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯಜಗನಾಥ ಹಲಮಡಗಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯಅಣದೂರು ಮಹಾರುದ್ರಪ್ಪ ಸ್ವಾಗತಿಸಿದರು. ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯರಾಜ್ಯ ಸಂಯೋಜಕ ಪಿ. ಎಸ್. ಕೌಶಿಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊನೆಯಲ್ಲಿಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯ ಬಸವಲಿಂಗಪ್ಪ ಮಲ್ಹಾರ ವಂದಿಸಿದರು.
ರಾಜ್ಯದ 6 ಶೈಕ್ಷಣಿಕ ವಲಯಗಳಲ್ಲಿಅತ್ಯುತ್ತಮ ಪ್ರತಿಭೆತೋರಿಆಯ್ಕೆಯಾದವಿದ್ಯಾರ್ಥಿಗಳು ಅವರ ಮಾರ್ಗದರ್ಶಿ ಉಪನ್ಯಾಸಕರೊಂದಿಗೆಸ್ಪರ್ಧೆಯಲ್ಲಿಭಾಗವಹಿಸಿದ್ದರು.