ಕಲಬುರಗಿ: ಅಫಜಲಪೂರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ 32 ಎಕರೆ ಕೆರೆ ಪ್ರದೇಶ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಅಹವಾಲಿನಲ್ಲಿ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕೆರೆ ಒತ್ತುವರಿ ಜಾಗ ವೀಕ್ಷಣೆಗೆ ವಾಹನ ಹತ್ತಿ ಹೊರಟರು. ಅಧಿಕಾರಿ-ಗ್ರಾಮಸ್ಥರು ಹಿಂಬಾಲಿಸಿದರು.
ಶನಿವಾರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಭಾಗವಾಗಿ ಸಾರ್ವಜನಿಕರ ಅಹವಾಲು ಸ್ವಿಕರಿಸಿದ ನಂತರ ಮಧ್ಯಾಹ್ನ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮದಲ್ಲಿ ಸಂಚಾರ ಕೈಗೊಂಡರು.
ಕೆರೆ ಜಮೀನು ಪ್ರದೇಶ ಮುಖ್ಯ ರಸ್ತೆಯಿಂದ ಅರ್ಧ ಕಿ.ಮೀ. ಒಳಗಡೆ ಇದ್ದ ಕಾರಣ ಮತ್ತು ಈ ರಸ್ತೆ ಎತ್ತಿನ ಚಕಡಿ ರಸ್ತೆಯಾಗಿದ್ದರಿಂದ ಇಲ್ಲಿ ಕಾರು ಚಲಿಸುವಂತಿರಲಿಲ್ಲ. ಹೀಗಾಗಿ ತಮ್ಮ ಕಾರಿನಿಂದ ಇಳಿದ ಡಿ.ಸಿ. ಯಶವಂತ ವಿ. ಗುರುಕರ್ ಸ್ಥಳೀಯರೊಬ್ಬರ ಬೈಕ್ ಹತ್ತಿ ಕೆರೆ ಒತ್ತುವರಿ ಪ್ರದೇಶ ವೀಕ್ಷಿಸಿದರು.
ಗ್ರಾಮದಲ್ಲಿ ರಸ್ತೆ ಹದಗೆಟ್ಟಿದೆ, ಮಳೆ ಬಂದರೆ ನೀರು ನಿಲ್ಲುತ್ತವೆ, ಕೆರೆ ಒತ್ತುವರಿಯಾಗಿವೆ ಎಂಬಿತ್ಯಾದಿ ದೂರುಗಳನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದಿಟ್ಟು ಪರಿಹಾರಕ್ಕೆ ಕೋರಿಕೊಂಡರು.
ಪಂಚಾಯತ್ ರಾಜ್ ಇಲಾಖೆಯಿಂದ ರಸ್ತೆ ಸುಧಾರಣೆ ಮಾಡಲಾಗುವುದು ಎಂದು ಗ್ರಾಮಸ್ಥರಿಗೆ ಡಿ.ಸಿ. ಭರವಸೆ ನೀಡಿದರು. ಮಳೆ ನೀರು ನಿಲ್ಲುತ್ತಿರುವ ಜಾಗ ವೀಕ್ಷಿಸಿದ ಅವರು ಕೂಡಲೆ 15 ದಿನದಲ್ಲಿ ಇದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಖಬರಸ್ತಾನ್ ಸಹ ವೀಕ್ಷಿಸಿದರು.
ಪ್ರಾಥಮಿಕ ಶಾಲೆಗೆ ಭೇಟಿ: ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. 1965 ರಲ್ಲಿ ಶಾಲೆ ನಿರ್ಮಾಣವಾಗಿದ್ದು, ಪ್ರಸ್ತುತ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಅಗ್ರಹಪಡಿಸಿದರು. ನಂತರ ಅರ್ಜುಣಗಿ ತಾಂಡಾ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಶ್ರಮ ವಸತಿ ಶಾಲೆ ವೀಕ್ಷಿಸಿದರು.
ಬಡದಾಳ ಆರೋಗ್ಯ ಕೇಂದ್ರಕ್ಕೆ ಭೇಟಿ: ನಂತರ ಡಿ.ಸಿ.ಯಶವಂತ ವಿ. ಗುರುಕರ್ ಬಡದಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಸ್ಥಳದಲ್ಲಿದ್ದ ಪಿ.ಹೆಚ್.ಸಿ.ಮುಖ್ಯಸ್ಥೆ ಡಾ.ರತ್ನಶೀಲಾ ಅವರು ಮಾತನಾಡಿ, ಆರೋಗ್ಯ ಕೇಂದ್ರಕ್ಕೆ 2 ಎಕರೆ ಜಮೀನು ಮಂಜೂರಾಗಿದೆ, ಪ್ರಸ್ತುತ ಸರ್ವೆ ಮಾಡಿದಾಗ 1 ಎಕರೆ 3 ಗುಂಟೆ ಮಾತ್ರ ಲಭ್ಯವಾಗುತ್ತಿದೆ. ಜಾಗ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಮತ್ತು ಕೇಂದ್ರಕ್ಕೆ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಕೋರಿದರು. ದಾಖಲಾತಿಗಳನ್ನು ಪಡೆದು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ ಸಂಜೀವಕುಮಾರ ದಾಸರ್ ಅವರಿಗೆ ಡಿ.ಸಿ. ಸೂಚಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಅಮೃತ ಮಾತಾರಿ, ತಹಶೀಲ್ದಾರ ಸಂಜೀವಕುಮಾರ ದಾಸರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ಮತ್ತಿತರ ಅಧಿಕಾರಿಗಳಿದ್ದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…