ಜಿಲ್ಲಾಧಿಕಾರಿಗಳ ನಡೆ ಹೊನಗುಂಟಾ ಗ್ರಾಮದ ಕಡೆ ಯಶಸ್ವಿ

0
192

ಗ್ರಾಮಗಳ ಜನರು ಪಿಂಚಣಿ, ವೃದ್ಧಾಪ್ಯ, ವಿಧವಾ ವೇತನದಂತಹ ಸಮಸ್ಯೆ ಎದುರಿಸಬಾರದು. ಪ್ರತಿ ಸಮಸ್ಯೆಗೆ ಪರಿಹಾರಕ್ಕಾಗಿ ತಾಲೂಕಾ ಕೇಂದ್ರಕ್ಕೆ ಬರುವಂತಾಗಬಾರದು.ಬದಲಾಗಿ ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹಾರ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸುತ್ತಿದ್ದು ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು-ಸುರೇಶ ವರ್ಮಾ ತಹಸೀಲ್ದಾರ.

ಶಹಾಬಾದ: ತಹಸೀಲ್ದಾರ ನಡೆ ಹಳ್ಳಿ ಕಡೆ ಹಿನ್ನೆಲೆಯಲ್ಲಿ ಶನಿವಾರ ತಹಸೀಲ್ದಾರ ಸುರೇಶ ವರ್ಮಾ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ ನೇತೃತ್ವದಲ್ಲಿ ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮಕ್ಕೆ ತೆರಳಿ ಗ್ರಾಮಸ್ಥರಿಂದ ಸಮಸ್ಯೆಗಳನ್ನು ಆಲಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದರೇ ಇನ್ನೂ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸುವ ಮೂಲಕ ಗ್ರಾಮದ ಜನರಿಂದ ಪ್ರಶಂಸೆಗೆ ಪಾತ್ರರಾದರು.

Contact Your\'s Advertisement; 9902492681

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎನ್ನುವ ಕಾರ್ಯಕ್ರಮಕ್ಕೆ ಶನಿವಾರ ತಾಲೂಕಿನ ಹೊನಗುಂಟಾ ಗ್ರಾಮಕ್ಕೆ ಇಡೀ ತಾಲೂಕಾಡಳಿತದೊಂದಿಗೆ ಗ್ರಾಮಕ್ಕೆ ತೆರಳಿದಾಗ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿಕೊಂಡು ಗ್ರಾಮದಲ್ಲಿ ಇರುವ ಸಮಸ್ಯೆಗಳಿಗೆ ಪರಿಹರಿಸಲು ಸಾಕ್ಷಿಯಾದರು. ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರಿಗೆ ಟೆಂಟ್ ಹಾಕಲಾಗಿತ್ತು. ಕುಡಿಯುವ ನೀರಿನ, ಊಟದ,ಆಸನಗಳ ವ್ಯವಸ್ಥೆ ಹಾಗೂ ಮೈಕ್ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು.ಅಲ್ಲದೇ ಇದೇ ಮೊದಲ ಬಾರಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಾಗಿದ್ದು ವಿಶೇಷವಾಗಿತ್ತು.

ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿದೆ. ಕಲುಷಿತ ನೀರು ಪೂರೈಕೆಯಾಗುತ್ತಿದೆ.ಇದರಿಂದ ಗ್ರಾಮದ ಮಕ್ಕಳಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ.ಅದಕ್ಕಾಗಿ ಕುಡಿಯುವ ನೀರಿನ ಶುದ್ಧಿಕರಣ ಘಟಕ ಸ್ಥಾಪಿಸಿ ಎಂದರು. ಗ್ರಾಮದಲ್ಲಿ ಚರಂಡಿ ಸಮಸ್ಯೆ ಇರುವುದರಿಂದ ಗ್ರಾಮದ ತುಂಬೆಲ್ಲಾ ಹೊಲಸು ನೀರು ಎಲ್ಲೆಂದರಲ್ಲಿ ಹರಿದು ಗ್ರಾಮದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಈ ಬಗ್ಗೆ ಅನೇಕ ಬಾರಿ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮದಲ್ಲಿ 2 ಎಕರೆ ಸಾರ್ವಜನಿಕ ರುದ್ರಭೂಮಿಯಿದ್ದು, ಅದರಲ್ಲಿ ಕಬ್ಬಲಿಗ ಹಾಗೂ ಪರಿಶಿಷ್ಟ ಜಾತಿಯವರಿಗೆ ಜಾಗವನ್ನು ನೀಡಬೇಕೆಂದು ಆಗ್ರಹಿಸಿದರು. ಅಲ್ಲದೇ ದಲಿತ ವಿದ್ಯಾರ್ಥಿ ಒಕ್ಕೂಟದ ಪಿ.ಎಸ್.ಮೇತ್ರೆ ಮಾತನಾಡಿ, ಅತಿವೃಷ್ಟಿಯಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಅದಕ್ಕೆ ಬೆಳೆ ಪರಿಹಾರ ಕೆಲವೊಬ್ಬರಿಗೆ ಬಂದರೇ, ಇನ್ನೋಬ್ಬರಿಗೆ ಬಂದಿಲ್ಲ. ಕೂಡಲೇ ಸರಿಪಡಿಸಬೇಕೆಂದು ರೈತರು ತಿಳಿಸಿದರು.

ಗ್ರಾಮದ ಕಡುಬಡವರಿಗೆ ಆಶ್ರಯ ಮನೆ ನೀಡಬೇಕೆಂದು ಒತ್ತಾಯಿಸಿದರು.ಅಲ್ಲದೇ ಅಂಗನವಾಡಿಯಲ್ಲಿ ಸರಿಯಾಗಿ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿಲ್ಲ.ಕೂಡಲೇ ಸರಿಪಡಿಸಬೇಕೆಂದು ತಿಳಿಸಿದರು. ಗ್ರಾಮದ ಪ್ರತಿ ವಾರ್ಡನಲ್ಲಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಬೇಕು.ಅಲ್ಲದೇ ಗ್ರಾಮದಿಂದ ಶಹಾಬಾದ ನಗರಕ್ಕೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು ಸುಮಾರು 101 ಅಹವಾಲುಗಳನ್ನು ಸ್ವೀಕರಿಸಿದರು. ಸ್ಥಳದಲ್ಲಿಯೇ 90 ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹಾರ ದೊರಕಿಸಿದರು. ವೃದ್ಯಾಪ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಸೇರಿದಂತೆ ಅನೇಕ ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಮಂಜೂರು ಮಾಡಲಾಯಿತು. ಕೆಲವೊಂದು ಪ್ರಮಾಣ ಪತ್ರವನ್ನು ಸ್ಥಳದಲ್ಲಿಯೇ ವಿತರಿಸುವ ಕೆಲಸ ಮಾಡಿದ್ದು ಮಾತ್ರ ಗ್ರಾಮಸ್ಥರ ಪ್ರಶಂಸೆಗೆ ಕಾರಣವಾಯಿತು.

ಇನ್ನುಳಿದ 11 ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಭೀಮಬಾಯಿ ಮಲ್ಲಪ್ಪ, ತಾಪಂ ಇಓ ಬಸಲಿಂಗಪ್ಪ ಡಿಗ್ಗಿ, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ, ಶಿಕ್ಷಣ ಸಂಯೋಜಕ ಶ್ರೀದ ರಾಠೋಡ, ಕೃಷಿ ಇಲಾಖೆಯ ಅಧಿಕಾರಿ ರವೀಂದ್ರ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶ್ರೀಧರ, ಪಶು ಇಲಾಖೆ ಡಾ. ನೀಲಪ್ಪ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ರವಿಕುಮಾರ ಮುತ್ತಗಾ, ಸಿಡಿಪಿಓ ಇಲಾಖೆಯ ಶಕುಂತಲಾ ಸಾಕ್ರೆ, ಗ್ರಾಮ ಲೆಕ್ಕಿಗರು ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here