ಬಿಸಿ ಬಿಸಿ ಸುದ್ದಿ

ಜಗತ್ತಿನ ಸಮಸ್ಯೆಗಳ ಪರಿಹರಿಸುವಲ್ಲಿ ವಿಜ್ಞಾನಿಗಳ ಪರಿಶ್ರಮ ಅಪಾರವಾದದ್ದು : ಶಾಸಕ ರೇವೂರ

ಕಲಬುರಗಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಜ್ಞಾನಿಗಳ ಜೀವನ, ಸಾಧನೆ ಅರಿತರೆ ಭವಿಷ್ಯದಲ್ಲಿ ತಮ್ಮನ್ನು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ಜನಸಾಮನ್ಯರ ಕೆಲಸದ ಹೊರೆಯನ್ನು ಕಡಿಮೆ ಮಾಡುವುದರಿಂದ ಹಿಡಿದು ಜಗತ್ತಿನ ಬಹುತೇಕ ಸಮಸ್ಯೆ, ಸವಾಲುಗಳಿಗೆ ತಮ್ಮ ಸಂಶೋಧನೆಗಳ ಮೂಲಕÀ ಪರಿಹಾರ ಒದಗಿಸುವಲ್ಲಿ ವಿಜ್ಞಾನಿಗಳ ಪಾತ್ರ ಅಪಾರವಾಗಿದೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಭಿಪ್ರಾಯಪಟ್ಟರು.

ಇಂದು ನಗರದ ಸರ್ವಜ್ಞ ಹಾಗೂ ಜಸ್ಟೀಸ್ ಶಿವರಾಜ ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ವಿಜ್ಞಾನ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸಂಜುಕುಮಾರ ಪಟ್ಟಣಕರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವಲ್ಲಿ ವಸ್ತು ಪ್ರದರ್ಶನ ಬಹುಮುಖ್ಯ ಪಾತ್ರ ವಹಿಸುತ್ತದೆ. ವಿಜ್ಞಾನ ಕ್ಷೇತ್ರದಲ್ಲಾದ ನೂತನ ಆವಿಷ್ಕಾರಗಳ ಮಾಹಿತಿ ಹಂಚಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ತೋರಿರುವುದನ್ನು ಅವರು ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ ಕಡ್ಲೇವಾಡ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಮಹತ್ವ ಜನಸಾಮಾನ್ಯರಿಗೆ ತಿಳಿಸುವ ಹಾಗೂ ಇತ್ತೀಚಿನ ದಿನಮಾನಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಾದ ಬೆಳವಣಿಗೆಗಳ ಮಾಹಿತಿ ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಸಂಘಟಿಸಲಾದ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆ ಹಾಗೂ ಸೃಜನಶೀಲತೆ ಪ್ರದರ್ಶಿಸಿರುವುದು ಸಂತೋಷದ ಸಂಗತಿ ಎಂದರು.

ವೇದಿಕೆಯ ಮೇಲೆ ಕರಾವಿಪ ಖಜಾಂಚಿ ಈ ಬಸವರಾಜು, ವಿಜ್ಞಾನ ವಸ್ತು ಪ್ರದರ್ಶನದ ರಾಜ್ಯ ಸಂಯೋಜಕ ಪಿ.ಎಸ್.ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಹಲಮಡಗಿ, ಸರ್ವಜ್ಞ ಪಿ.ಯು. ಕಾಲೇಜಿನ ವ್ಯವಸ್ಥಾಪಕ ಕರುಣೇಶ ಹಿರೇಮಠ ಉಪಸ್ಥಿತರಿದ್ದರು. ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಕುಂಟೆಪ್ಪ ಗೌರಿಪೂರ ಸ್ವಾಗತಿಸಿದರು. ಇನ್ನೋರ್ವ ಸದಸ್ಯ ಅಣದೂರೆ ಮಹಾರುದ್ರಪ್ಪ ವಂದಿಸಿದರು.

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಗೌರಿಬಿದನೂರು ನ್ಯಾಷನಲ್ ಕಾಲೇಜಿನ ಗಣೇಶ ಕುಮಾರ್ ಹಾಗೂ ಪಣೀಂದ್ರ ಅವರ ತಂಡ ರೂ.10000/- ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ, ಭದ್ರಾವತಿಯ ಸರ್ ಎಮ್. ವಿ. ಸರ್ಕಾರಿ ವಿಜ್ಞಾನ ಕಾಲೇಜಿನ ಅಂಜಲಿ ಎ. ಹಾಗೂ ಪ್ರಜ್ಞಾ ಜೋಡಿದಾರ್ ಅವರ ತಂಡ ರೂ.7000/- ನಗದು ಬಹುಮಾನದೊಂದಿಗೆ ದ್ವಿತೀಯ ಸ್ಥಾನ, ದಾವಣಗೆರೆಯ ಡಿ.ಆರ್. ಎಮ್. ವಿಜ್ಞಾನ ಕಾಲೇಜಿನ ರಾಕೇಶ್ ಹಾಗೂ ತರುಣ ಅವರ ತಂಡ ರೂ.5000/- ನಗದು ಬಹುಮಾನದೊಂದಿಗೆ ತೃತೀಯ ಸ್ಥಾನ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಶ್ರಾವ್ಯಾ ಹಾಗೂ ಆಯೇಷಾ ಅವರ ತಂಡ ಮತ್ತು ಹುಮನಾಬಾದನ ಎಸ್.ವಿ. ಪದವಿ ಕಾಲೇಜಿನ ಶಿವಲೀಲಾ ಮತ್ತು ವಿಜಯಲಕ್ಷ್ಮಿ ಅವರ ತಂಡ ತಲಾ ರೂ 3000 ನಗದು ಬಹುಮಾನದೊಂದಿಗೆ ಸಮಾಧಾನಕಾರ ಬಹುಮಾನ ಪಡೆದುಕೊಂಡರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago