ಬಿಸಿ ಬಿಸಿ ಸುದ್ದಿ

ದೀಪಾವಳಿ ಹಬ್ಬದ ಪ್ರಯುಕ್ತ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಗಮವು ಅಕ್ಟೋಬರ್ 24 ರಂದು ನರಕ ಚತುರ್ದಶಿ ಹಾಗೂ ಅಕ್ಟೋಬರ್ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 21 ರಿಂದ ಕ್ಟೋಬರ್ 23 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅಕ್ಟೋಬರ್ 26 ರಿಂದ ಅಕ್ಟೋಬರ್ 30 ವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಇ-ಟಿಕೇಟ್ ಬುಕಿಂಗ್‍ನ್ನು  www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ / ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬೇಕು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ಪಟ್ಟಿಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು / ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕ ಪ್ರಯಾಣಿಕರು ಪಾಲನೆ ಮಾಡುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago