ಕಲಬುರಗಿ: ಕೇಂದ್ರ ಸರ್ಕಾರದ ಆದೇಶದಂತೆ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡದೆ ಹೋದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದರೊಂದಿಗೆ ವಿವಿಧ ರೀತಿಯ ಉಗ್ರವಾದ ಹೋರಾಟಗಳು ಮಾಡುತ್ತೇವೆ. ಎಂದು ಸಮಿತಿಯ ರಾಜ್ಯ ಅಧ್ಯಕ್ಷ ಡಾ.ಸರ್ದಾರ ರಾಯಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಸಿಂದಗಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗಳಲ್ಲಿ ನಮಗೆ ಮತ ನೀಡಿದ್ದರೆ ನಿಮಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುತ್ತೇವೆ ಎಂದು ಕೊಟ್ಟಿದ್ದರು. ಕೊಟ್ಟ ಭರವಸೆ ಈಡೇರಿಸದಿದ್ದಕ್ಕೆ ಕಲಬುರ್ಗಿಯಲ್ಲಿ ಮುತ್ತಿಗೆ ಹಾಕಿದ ಸಂದರ್ಭದಲ್ಲಿ 48 ಗಂಟೆಗಳಲ್ಲಿ ನಿಮಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡದಿದ್ದರೆ ಮತ್ತೊಮ್ಮೆ ನನಗೆ ಕಲಬುರ್ಗಿಗೆ ಬರಲು ಬಿಡಬೇಡಿ ಎಂದು ಹೇಳಿ ಹೋಗಿದ್ದರು. ಅವರು ಹೇಳಿದ ಹಾಗೆ ಕೊಟ್ಟ ಭರವಸೆಯನ್ನು ಈಡೇರಿಸದೆ ಕಲಬುರಗಿಗೆ ಸಪ್ಟಂಬರ್ 17ರಂದು ಕಲ್ಯಾಣ ಕರ್ನಾಟಕ ವಿಮೋಚನಾದಿನದ ಅಮೃತ್ ಮಹೋತ್ಸವದಲ್ಲಿ ಕಾರ್ಯಕ್ರಮಕ್ಕೆ ಬಂದಾಗ ಸಿಎಂಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಲಾಗಿತ್ತು.
ಪರಿಶಿಷ್ಟ ಪಂಗಡ ಜಾತಿಯ ಮೀಸಲಾತಿ ಪ್ರಮಾಣ ಹೆಚ್ಚಿಸಿದ ನಂತರ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಪ್ರತಿಶತ 3ರರಿಂದ 7ಕ್ಕೆ ಹೆಚ್ಚಿಸಿದ್ದಾರೆ. ಪ್ರತಿಶತ 7ರಷ್ಟು ಹೆಚ್ಚಿಸಿದ ನಂತರವು ಕೂಡ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ. ಈಗಲಾದರೂ ಮುಖ್ಯಮಂತ್ರಿಗಳು ಕೂಡಲೆ ಮಾತು ಕೊಟ್ಟಂತೆ ಪ್ರಮಾಣ ಪತ್ರ ನೀಡಿ ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜೇಂದ್ರ ರಾಜವಾಳ, ಡಿಗಂಬರ ಡಾಂಗೆ, ಅಶೋಕ ಒಡಗೇರಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…