ಕಲಬುರಗಿ: 2019-20 ನೇ ಸಾಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಪಂಪಸೆಟ್ ಹಾಗೂ ಇತರ ಸಾಮಾಗ್ರಿಗಳನ್ನು ಕೆಕೆಆರ್ಡಿಬಿ ಅಧ್ಯಕ್ಷ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕರಾದ ಪ್ರಿಯದರ್ಶಿನಿ ಚಿಡುಗುಪಕರ್, ತಾಲೂಕು ಅಭಿವೃದ್ಧಿ ಅಧಿಕಾರಿ ಹಣಮಂತ ಜಾಗಿರದಾರ ಇದ್ದರು.