ತಳವಾರ ಸಮಾಜದ ಹೋರಾಟಗಾರರನ್ನು ಮನೆಯಿಂದ ಬಂಧಿಸಿದ ಪೊಲೀಸರು

ಕಲಬುರಗಿ: ಯಾದಗಿರಿ ಜಿಲ್ಲೆಯ ಹುಣಸಗಿ ಯು.ಕೆ.ಪಿ. ಕ್ಯಾಂಪ್ ಮೈದಾನದಲ್ಲಿ ಮತ್ತು ಕಮಲಾಪುರ ತಾಲೂಕಿನ ಮಹಾಗಾಂವ ಕ್ರೀಡಾಂಗಣದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ತಳವಾರ್ ಎಸ್ ಟಿ ಹೋರಾಟ ಸಮಿತಿಯ ಮುಖಂಡರನ್ನು ಬುಧವಾರ ಮನೆಗಳಿಂದ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರದ ಆದೇಶದಂತೆ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯಿಸಿ 17ರಂದು ಕಲ್ಯಾಣ ಕರ್ನಾಟಕ ವಿಮೋಚನಾದಿನದ ಅಮೃತ್ ಮಹೋತ್ಸವದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿರುವ ಘಟನೆಯಿಂದ ರಾಜ್ಯಾದ್ಯಂತ ಮುಖ್ಯಮಂತ್ರಿಗಳಿಗೆ ಹಾಗೂ ಬಿಜೆಪಿ ಸರ್ಕಾರಕ್ಕೆ ಮುಜುಗರವಾಗಿತ್ತು. ಆದರಿಂದ ಮತ್ತೊಮ್ಮೆ ಮುಜುಗರ ಕೊಳಗಾಗಬಾರದೆಂದು ಮುಂಚಿತವಾಗಿ ಎಲ್ಲ ಹೋರಾಟಗಾರರನ್ನು ಬಂಧನ ಮಾಡಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ ಎಂದು ಎಂದು ಸಮಿತಿಯ ರಾಜೇಂದ್ರ ರಾಜವಾಳ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂವಿಧಾನ ಬದ್ಧವಾದ ನ್ಯಾಯ ಸಿಗುತ್ತಿಲ್ಲ, ಇನ್ನೊಬ್ಬರನ್ನು ಓಲೈಸುವುದಕ್ಕಾಗಿ ಹಾಗೂ ತಮ್ಮ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಪದೇ ಪದೇ ಸುಳ್ಳು ಆಶ್ವಾಸನೆ ನೀಡುತ್ತಾ ತಳವಾರರಿಗೆ ಮುಖ್ಯಮಂತ್ರಿಗಳು ಅನ್ಯಾಯ ಮಾಡುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕಾರಣಕ್ಕೆ ಹೋರಾಟಗಾರರು ಉಗ್ರವಾದ ಹೋರಾಟ ಮಾಡಿದರೆ ತಮಗೆ ಮತ್ತು ಸರಕಾರಕ್ಕೆ ಡ್ಯಾಮೇಜ್ ಆಗಬಹುದು ಎಂಬ ಕಾರಣದಿಂದ ಜನಸ್ಪಂದನ ಕಾರ್ಯಕ್ರಮಕ್ಕೆ ಅಡ್ಡಿಯಾಗಬಾರದೆಂದು ಈ ರೀತಿ ನಮ್ಮನ್ನು ಬಂಧನದಲ್ಲಿರಿಸಿದ್ದಾರೆ ಎಂದು ಡಾ. ಸರ್ದಾರ ರಾಯಪ್ಪ, ಗಿರೀಶ್ ತುಂಬಗಿ, ಅಶೋಕ್ ಕಂಕಿ ನೆಲೋಗಿ, ದಿಗಂಬರ್ ಪಿ ಮುದಕಣ್ಣ, ದಿಗಂಬರ್ ಡಾಂಗೆ, ದಿಗಂಬರ್ ಕಡಪಗೋಳ, ಸುನಿತಾ ತಳವಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago