ಬಿಸಿ ಬಿಸಿ ಸುದ್ದಿ

ವಸ್ತುಪ್ರದರ್ಶನದಲ್ಲಿ ಆರೋಗ್ಯ, ನೈರ್ಮಲ್ಯ ಸೇವೆಗಳ ಅನಾವರಣ

ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜನಜಾಗೃತಿ ವಸ್ತುಪ್ರದರ್ಶನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ್ ಹೆಡೆ ಅವರು ಭಾನುವಾರ ಚಾಲನೆ ನೀಡಿದರು.

ಈ ಜನಜಾಗೃತಿ ವಸ್ತು ಪ್ರದರ್ಶನದಲ್ಲಿ ನವಜಾತ ಶಿಶುಗಳ ಆರೈಕೆ, ಮಕ್ಕಳ ಅಪೌಷ್ಠಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ಪುನಶ್ಚೇತನಾ ಕೇಂದ್ರಗಳನ್ನು ಸ್ಥಾಪಿಸಿರುವುದು, ಸಂಪೂರ್ಣ ಲಸಿಕೆ ಪರಿಪೂರ್ಣ ಆರೋಗ್ಯ ಧ್ಯೇಯವಾಕ್ಯದಡಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಕುರಿತ ಅಂಶಗಳ ವಿವರಣೆ 5 ವರ್ಷದಲ್ಲಿ 7 ಬಾರಿ ಲಸಿಕೆ ತಪ್ಪದೆ ಹಾಕಿಸುವುದು, ಪೌಷ್ಠಿಕ ಆಹಾರ ಪುನಶ್ಚೇತನಾ ಕೇಂದ್ರಗಳ ಸ್ಥಾಪನೆಯ ಮೂಲಕ ಎಲ್ಲರಿಗೂ ಆರೋಗ್ಯ ಎಲ್ಲಡೆಯೂ ಆರೋಗ್ಯ, ರಕ್ತಹೀನತೆ ತಡೆಗಟ್ಟುವ ಬಗೆ, ಕ್ಷಯರೋಗದ ಲಕ್ಷಣಗಳು ಮತ್ತು ನಿಯಂತ್ರಣದ ಕ್ರಮಗಳು, ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಲಕ್ಷಣಗಳು ಮತ್ತು ಮುನ್ನಚ್ಚೆರಿಕಾ ಕ್ರಮಗಳು, ಆರೋಗ್ಯ ಉಪಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾದರಿಯಲ್ಲಿ ಸೌಲಭ್ಯಗಳ ಒದಗಿಸುವಿಕೆ, ಮಾನಸಿಕ ಆರೋಗ್ಯ, ಜನನಿ-ಶಿಶು ಸುರಕ್ಷಾ, ತಾಯಿ ಕಾರ್ಡ್, ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಠಿಕಾಂಶದ ಆಹಾರ ಸೇವನೆಯ ಕ್ರಮಗಳ ಕುರಿತ ಸಂಪೂರ್ಣ ಮಾಹಿತಿ ಒಳಗೊಂಡ ಬೃಹತ್ ಫಲಕಗಳ ಪ್ರದರ್ಶನಕ್ಕಿಡಲಾಗಿದೆ.

ವಿದ್ಯುತ್ ಬಗ್ಗೆ ಜಾಗೃತಿ ಇದ್ದು, ವಿದ್ಯುತ್ ಲೈನ್‍ಮ್ಯಾನ್‍ಗಳು ಸುರಕ್ಷತಾ ಕ್ರಮಗಳನ್ನು ಪಾಲಿಸಲು ನಿಮ್ಮ ಸುರಕ್ಷಿತ ನಮ್ಮ ಆದ್ಯತೆಯ ಕಡೆ ಗಮನವಹಿಸುವುದು, ರಾಷ್ಟ್ರೀಯ ಫ್ಲೋರೋಸಿಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ, ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ, ಪ್ರತಿ ಜಿಲ್ಲೆಯಲ್ಲೂ ಮಾನಸಿಕ ಆರೋಗ್ಯ ಕಾರ್ಯಕ್ರಮ ತಂಡದಿಂದ 24+7 ಆರೋಗ್ಯ ಮತ್ತು ಕ್ಷೇಮ ತಂಡಗಳ ಕಾರ್ಯಚರಣೆ, ತಾಯಂದಿರ ಸಂಪೂರ್ಣ ವಾತ್ಸಲ್ಯ ಕಾರ್ಯಕ್ರಮ, ಮನೆಯ ಹೊರಗಡೆ ಶೌಚಾಲಯ ನಿರ್ಮಾಣ ಸೇರಿದಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿ ಒಳಗೊಂಡ ಫಲಕಗಳನ್ನು ಈ ವಸ್ತುಪ್ರದರ್ಶನಕ್ಕಿಡಲಾಗಿದ್ದು, ಜನರು ಅತ್ಯಂತ ಕುತೂಹಲ ಹಾಗೂ ಆಸಕ್ತಿಯಿಂದ ವೀಕ್ಷಿಸುತ್ತಿರುವುದು ಕಂಡುಬರುತ್ತಿದೆ.

ಈ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಡಿಎಚ್‍ಒ ಡಾ.ಶಿವರಾಜ ಹೆಡೆ ಅವರು, ಮಕ್ಕಳಲ್ಲಿ ತೀವ್ರಅಪೌಷ್ಠಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 32 ಪೌಷ್ಠಿಕ ಆಹಾರ ಪುನಶ್ಚೇತನಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯಲ್ಲಿ ವಿಮ್ಸ್ ಆಸ್ಪತ್ರೆ ಮತ್ತು ಹೊಸಪೇಟೆಯ ತಾಲೂಕು ಆಸ್ಪತ್ರೆಯಲ್ಲಿ ಈ ಪುನಶ್ಚೇತನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 57 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಾಗುವ ಸೇವೆಗಳನ್ನು ಈ ಉಪಕೇಂದ್ರಗಳಲ್ಲಿ ಕಲ್ಪಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ವಿವಿಧ ಆರೋಗ್ಯ ಸೇವೆಗಳು ಮತ್ತು ಆರೋಗ್ಯ ಇಲಾಖೆಯ ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ವಸ್ತುಪ್ರದರ್ಶನ ಏರ್ಪಡಿಸಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಡಿಟಿಒ ಕೃಷ್ಣಮೂರ್ತಿ, ಡಿಪೋ ಮ್ಯಾನೇಜರ್ ಅಯಾಜ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್ ಶಿವರಾಜ್ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ್,ಬಿಎಚ್‍ಇಒಗಳಾದ ಶಾಂತವ್ವ ಉಪ್ಪಾರ್,ಖುರ್ಷಿದಾ ಬೇಗಂ,ಪ್ರೊಜೆಕ್ಷನಿಸ್ಟ್ ನರಸಿಂಹಮೂರ್ತಿ, ಎನ್‍ಇಕೆಆರ್‍ಟಿಸಿಯ ರವಿ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420