ಕಲಬುರಗಿ: ಬೀದರ್, ಕಲಬುರಗಿ, ಯದಗಿರಿ ಜಿಲ್ಲೆಗಳಲ್ಲಿನ ಕುರುಬ ಪದವನ್ನು ಗೊಂಡ ಸಮಪದವಾಗಿ ರಾಜ್ಯದ ಎಸ್ಟಿ ಅನುಕ್ರಮ ಸಂಖ್ಯೆ- 9ರಲ್ಲಿ ಸೇರಿಸುವಂತೆ ಆಗ್ರಹಿಸಿ ಮೂರು ಜಿಲ್ಲೆಗಳ ಕುರುಬ ಸಮಾಜ ಬಾಂಧವರು ಶುಕ್ರವಾರ ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಮಾವೇಶ ನಡೆಸಿದರು.
ನಗರದ ಜಗತ್ ವೃತ್ತದಿಂದ ಸರ್ದರ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಸಹಸ್ರಾರು ಜನ ಮೆರವಣಿಗೆಯಲ್ಲಿ ಹೊರಟು ಬಹಿರಂಗ ಸಭೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಬ್ಯಾನರ್ ಅಡಿಯಲ್ಲಿ ನಡೆದ ಈ ಸಮಾವೇಶದಲ್ಲಿ ತಿಂಥಣಿ ಸಿದ್ಧರಮಾನಂದ ಪುರಿ ಸ್ವಾಮೀಜಿ, ಕಲಬುರಗಿ ಸಂಘದ ಜಿಲ್ಲಾಧ್ಯಕ್ಷರಾದ ಗುರುನಾಥ ಪೂಜಾರಿ, ಯದಗಿರಿಯ ಗಿರೆಪ್ಪಗೌಡ ಬಾಣತಿಹಾಳ, ಬೀದರ್‍ನ ಸಂತೋಷ ದಾನೇಶ, ಕಲಬುರಗಿಯ ಮಲ್ಲಿಕಾರ್ಜುನ ಸಿ. ಮುಡಬೂಳ ಈ ಮುಂತಾದವರ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಮೂರು ಜಿಲ್ಲೆಗಳ ಸಾವಿರಾರು ಭಾಗವಹಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಈ ಬೇಡಿಕೆ ಕುರಿತಾಗಿ ರಾಜ್ಯ ಸರ್ಕಾರ ಈ ಹಿಂದೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿದ್ದರೂ ಕೇಂದ್ರ ಸರ್ಕಾರ ಈವರೆಗೆ ವಿಳಂಬ ನೀತಿ ಅನುಸರಿಸುತ್ತಿದೆ. ಮೈಸೂರು, ಕೊಳ್ಳೆಗಾಲದ ಬೆಟ್ಟ ಕುರುಬರನ್ನು ಎಸ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವಂತೆ ನಮ್ಮ ಭಾಗದ ಗೊಂಡ ಕುರುಬರನ್ನು ಸಹ ಎಸ್ಟಿ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರುವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…