ಕಲಬುರಗಿ: ವೈಚಾರಿಕ ದೃಷ್ಟಿಕೋನದಲ್ಲಿ ಹಬ್ಬಗಳನ್ನು ಆಚರಿಸಬೇಕೆಂಬ ಸಂದೇಶ ಸಾರುವ ಉದ್ದೇಶದಿಂದ ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯು ಗೋದುತಾಯಿ ನಗರದ ಶಿವಾ ಮಂದಿರ ಹಿಂಬದಿಯಲ್ಲಿರುವ ಸೋ ಕೇರ್ ಇಂಡ್ ಮಕ್ಕಳ ಮನೆಯ ಮುಗ್ಧ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಹಾಲು ಮತ್ತು ಹಣ್ಣುಗಳನ್ನು ಕೊಡುವ ಮೂಲಕ ಅರ್ಥಪೂರ್ಣ ಬಸವ ಪಂಚಮಿ ಆಚರಣೆ ಕಾರ್ಯಕ್ರಮ ನಾಳೆ (ಸೋಮವಾರ) ಬೆಳಗ್ಗೆ 10.30 ಕ್ಕೆ ಆಯೋಜಿಸಿದೆ ಎಂದು ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹಾಗೂ ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಶಟಕಾರ ತಿಳಿಸಿದ್ದಾರೆ.
ಕಲ್ಲು ಬಂಡೆಯ ಮೇಲೆ ಸಮೃದ್ಧವಾದ ಹಾಲು ಹಳ್ಳದಂತೆ ಹರಿಯುತ್ತಿರುವುದು ನಮ್ಮ ಅಂಧಶ್ರದ್ಧೆಯ ಪರಮಾವಧಿಯಾಗಿದೆ. ವೈಜ್ಞಾನಿಕ, ವೈಚಾರಿಕ ವಿವೇಚನೆಯನ್ನು ಇಂದಿನ ಜನಮನಕ್ಕೆ ತಲುಪಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದು ಅವರು ವಿವರಿಸಿದ್ದಾರೆ.
ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕರು, ಜಿಪಂ ಸದಸ್ಯರು, ಪಾಲಿಕೆ ಸದಸ್ಯರು, ಸಾಮಾಜಿಕ ಚಿಂತಕರು ಭಾಗವಹಿಸಲಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…