ಕಲಬುರಗಿ: ಪ್ರಸಕ್ತ 2022-23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಬೆಳೆ ಪರಿಹಾರ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಹೀಗಾಗಿ ರೈತರ ಬ್ಯಾಂಕ್ ಖಾತೆಗಳನ್ನು ಹೋಲ್ಡ್ ಮಾಡದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿನ ಬೆಳೆ ಹಾನಿಗೆ ರಾಜ್ಯ ಸರಕಾರವು ಇಲ್ಲಿಯವರೆಗೂ ಸುಮಾರು 2 ಲಕ್ಷ ಕಿಂತ ಹೆಚ್ಚು ರೈತರ ಬ್ಯಾಂಕ ಖಾತೆಗೆ ನೇರವಾಗಿ ಪರಿಹಾರ ಹಣವನ್ನು (ಡಿ.ಬಿ.ಟಿ) ಮುಖಾಂತರ ಜಮೆ ಮಾಡಲಾಗಿದೆ.
ಆದರೆ, ಜಿಲ್ಲೆಯ ಕೆಲವು ಬ್ಯಾಂಕಗಳ ವ್ಯವಸ್ಥಾಪಕರು ರೈತರ ಖಾತೆಗೆ ಬಂದ ಪರಿಹಾರ ಹಣವನ್ನು ನೀಡದೆ ಖಾತೆಯನ್ನು ಹೋಲ್ಡ್ ಮಾಡಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ರೈತರ ಖಾತೆಗಳನ್ನು ಹೋಲ್ಡ್ ಮಾಡದೆ ಖಾತೆಗೆ ಬಂದ ಪರಿಹಾರ ಹಣವನ್ನು ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಡಿ.ಸಿ ಅವರು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ.