ಕಲಬುರಗಿ: ಜಿಲ್ಲೆ ಕಮಲಾಪುರ ತಾಲೂಕಿನ ದೇವಲುನಾಯಕ್ ತಾಂಡಾದಲ್ಲಿ ಅಣ್ಣ ತಮ್ಮಂದಿಯರ ಪತ್ನಿಯರಿಬ್ಬರು ಪರಸ್ಪರ ಕಿತ್ತಾಡಿಕೊಂಡು ಮಕ್ಕಳೊಂದಿಗೆ ಇಬ್ಬರು ಬಾವಿಗೆ ಬಿದ್ದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಕಮಲಾಪುರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ.
ರೇಷ್ಮಾ ಚವ್ಹಾಣ್ (26) ಸಾವನಪ್ಪಿರುವ ಮಹಿಳೆ. ಮೃತ ಮಹಿಳೆ ಗರ್ಭಿಣಿ ಎಂದು ಹೇಳಲಾಗುತ್ತಿದ್ದು, ಮೃತರು ಕಲ್ಪನಾ ಚವ್ಹಾಣ್ ಹಾಗೂ ಇವರ ಇಬ್ಬರು ಮಕ್ಕಳನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ರೇಷ್ಮಾ ಪತಿ ಮಾರುತಿ, ಕಲ್ಪನಾ ಪತಿ ಸಂತೋಷ್ ಇಬ್ಬರು ಸಹೋದರಾಗಿದ್ದು ಕುವೈತ್ನಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ತಿಳಿದುಬಂದಿದೆ. ಸಹೋದರರ ಇಬ್ಬರು ಪತ್ನಿಯರು ಕಮಲಾಪುರದ ದೇವಲುನಾಯಕ್ ತಾಂಡಾದಲ್ಲಿ ಅತ್ತೆ-ಮಾವನ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಇಬ್ಬರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಲೇ ಇತ್ತು ಎಂದು ತಿಳಿದು ಬಂದಿದೆ.
ಮೃತ ಮಹಿಳೆಯ ತಾಯಿ ಕಾಲು ಜಾರಿ ಬಾವಿಗೆ ಬಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…