ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, , ಜಿಲ್ಲಾ ಪಂಚಾಯತ್ ಮತ್ತು “ಸಂಜೀವಿನಿ”ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿಯರು) “ಪರಿಸರ ಕೃಷಿ ವಿಧಾನಗಳು” ಕುರಿತು ಜಿಲ್ಲೆಯ ವಿವಿಧ ತಾಲೂಕಿನ 30 ಕೃಷಿ ಸಖಿಯರ ಐದು ದಿನಗಳ ತರಬೇತಿ ಕಾರ್ಯಕ್ರಮ ಶನಿವಾರ ಮುಕ್ತಾಯಗೊಂಡಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಸಕರಾದ ಡಾ. ಸಮದ್ ಪಟೇಲ್, ಭಾಗವಹಿಸಿ ಕೃಷಿ ಸಖಿಯರು ತರಬೇತಿಯಲ್ಲಿ ಪಡೆದ ಜ್ಞಾನವನ್ನು ಹಾಗೂ ಕೃಷಿ ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕೆಂದರು ಹೇಳಿದರು.
ಡಿಆರ್‍ಡಿಎ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಜಗದೇವ ಬಿ ಮಾತನಾಡಿ ಕೃಷಿ ಸಖಿಯರು ರೈತರ ಬಡತನ ನಿರ್ಮೂಲನೆ ಮಾಡಲು ಕೃಷಿಯಲ್ಲಿರುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರೇರಿಸಬೇಕೆದು ಮುಖ್ಯ ಅತಿಥಿಗಳಾಗಿ ಆಗಮಿಸಿ ಸಲಹೆ ನೀಡಿದರು.
ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಎಮ್. ಎಮ್. ಧನೋಜಿ ಮಾತನಾಡಿ ಭಾರತ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು ಬಿಡುಗಡೆ ಮಾಡಿದ ನೂತನ ತಾಂತ್ರಿಕತೆಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಕೃಷಿ ಸಖಿಯರು ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕೆಂದರು ಹೇಳಿದರು.
ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಣ್ಣು ವಿಜ್ಞಾನಿ ಡಾ. ಶ್ರೀನಿವಾಸ ಬಿ.ವಿ ರವರು ಸ್ವಾಗತ ಕೋರಿದರೆ, ಸಸ್ಯಶಾಸ್ತ್ರ ವಿಜ್ಞಾನಿಯಾದ ಡಾ. ಜಹೀರ್ ಅಹೆಮದ್ ರವರು ವಂದಿಸಿದರು. ಕ್ಷೇತ್ರ ವ್ಯವಸ್ಥಾಪಕರಾದ ಎಂ.ಸಿ ಪಾಟೀಲ್ ರವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗುರುನಾಥ ಶೆಟಕರ್, ನಾಗರಾಜ್, ಲೋಹಿತ್ ಹಾಗೂ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…