ಬಿಸಿ ಬಿಸಿ ಸುದ್ದಿ

ಆಳಂದ ಪಟ್ಟಣದಲ್ಲಿ ಬಸವೇಶ್ವರ ಮೂರ್ತಿ ಅನಾವರಣ: ರವಿ ಮಾಲಶೆಟ್ಟಿ ಭೂಸನೂರ ಹರ್ಷ

ಕಲಬುರಗಿ: ಆಳಂದ ಪಟ್ಟಣದ ತಾಲೂಕು ಆಡಳಿತ ಭವನದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಅಶ್ವರೂಢ ಮೂರ್ತಿ ಅನಾವರಣ ಮಾಡುತ್ತಿರುವುದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ರವಿ ಮಾಲಶೆಟ್ಟಿ ಭೂಸನೂರ ಹರ್ಷ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಶಾಸಕ ಸುಭಾಷ ಆರ್. ಗುತ್ತೇದಾರ್ ಅವರ ವಿಶೇಷ ಕಾಳಜಿಯಿಂದ ಬಹುದಿನಗಳ ಬೇಡಿಕೆಯಾಗಿದ್ದ ಬಸವೇಶ್ವರ ಮೂರ್ತಿ ಅನಾವರಣ ಕೊನೆಗೂ ಈಡೇರಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಸವೇಶ್ವರ ಮೂರ್ತಿ ಅನಾವರಣಗೊಳ್ಳುವಂತಾಗಬೇಕು. ಶಾಸಕರ ಅನುದಾನದಡಿ 7 ಅಡಿ ಪಂಚಲೋಹದಿಂದ ಮೂರ್ತಿ ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ವೀರಶೈವ ಸಮಾಜದ ಕುಲಬಾಂಧವರಿಗೆ ಸಂತಸವನ್ನುಂಟು ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಸವಣ್ಣನವರ ಅನುಯಾಯಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago