ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಣಾಪೂರ ಗ್ರಾಮಕ್ಕೆ ಹೊಸದಾಗಿ ಪಡಿತರ ಅಂಗಡಿ ಮಂಜೂರು ಮಾಡಲಾಗಿದ್ದು, ಡೀಲರ್‍ಶಿಪ್ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯ ಸರ್ಕಾರ ಸ್ವಾಮ್ಯದ ನಿಗಮಗಳು, ಕಂಪನಿಗಳು, ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳು, ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಹಾಪಕಾಮ್ಸ್, ಲ್ಯಾಂಪ್ಸ್ ಸಹಕಾರಿ ಸಂಘಗಳು, ನೋಂದಾಯಿತ ಸಹಕಾರಿ ಸಂಘಗಳು, ಪ್ರಾಥಮಿಕ ಗ್ರಾಹಕರ ಸಹಕಾರಿ ಸಂಘಗಳು, ನೇಕಾರರ ಸಹಕಾರಿ ಸಂಘ, ವಿವಿದೋದ್ದೇಶ ಸಹಕಾರಿ ಸಂಘ, ವಿಕಲಚೇತನ ಕಲ್ಯಾಣ ಸಹಕಾರಿ ಸಂಘ, ಸಹಕಾರಿ ಸಂಘಗಳಿಂದ ನಡೆಸಲ್ಪಡುತ್ತಿರುವ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್‍ಗಳು, ಸ್ತ್ರೀ ಶಕ್ತಿ-ಮಹಿಳಾ ಸ್ವ-ಸಹಾಯ ಗುಂಪುಗಳು, ವೈಯಕ್ತಿಕವಾಗಿ ತೃತೀಯ ಲಿಂಗಿಗಳು ಅಥವಾ ವಿಕಲಚೇತನರು ಡೀಲರ್‍ಶಿಪ್ ಮಂಜೂರಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳು ಲಗತ್ತಿಸಿ ಚಿಂಚೋಳಿ ತಹಶೀಲ್ದಾರ ಕಚೇರಿಗೆ ನವೆಂವರ್ 18 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ ತಿಳಿಸಿದ್ದಾರೆ.
ಅರ್ಜಿ ನಮೂನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗೆ ತಹಶೀಲ್ದಾರ ಕಚೇರಿಗೆ ಸಂಪರ್ಕಿಸಬಹುದಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…