ಬಿಸಿ ಬಿಸಿ ಸುದ್ದಿ

ಸರಕಾರ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿಲ್ಲ

ಕಲಬುರಗಿ: ಬಿಸಿಯೂಟ ನೀಡುವವರೆಗೆ ಉಪವಾಸ ಹಾಕುತ್ತಿರುವ ಸರಕಾರದ ಕ್ರಮ ಖಂಡನೀಯವಾಗಿದೆ ಎಂದು ಜಿಲ್ಲಾ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಪ್ರಭುದೇವ ಯಳಸಂಗಿ ಹೇಳಿದರು.

ಕಮಲಾಪುರ ನಗರದ ಸರಕಾರಿ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ ಸರಕಾರವು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಸಮಯಕ್ಕೆ ಸರಿಯಾಗಿ ವೇತನ ಕೊಡದೆ ಕಾರ್ಮಿಕರ ಕುಟುಂಬ ಬೀದಿ ಪಾಲಾಗುತ್ತಿರುವದು ವಿಷಾದನೀಯ ಸಂಗತಿ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕಾ ಅಧ್ಯಕ್ಷರಾದ ಮಹಾದೇವಿ ಜಾಧವ ಮಾತನಾಡಿ ಬಿಸಿಯೂಟ ತಯಾರಕರಿಗೆ ಸರಕಾರ ಕನಿಷ್ಠ ವೇತನವೂ ಸರಿಯಾದ ಸಮಯಕ್ಕೆ ನೀಡದೆ, ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿಲ್ಲ ಎಂದು ಹೇಳಿದರು.

ವೇತನ ಸೇರಿದಂತೆ ಇತರ ಬೇಡಿಕೆಗಳು ಈಡೇರಿಸದಿದ್ದರೆ ಜಿಲ್ಲಾ ಜಿಲ್ಲಾ ಪಂಚಾಯತ ಕಾರ್ಯಾಲಯ ಮುತ್ತಿಗೆ ಹಾಕಲಾಗುವುದು ಎಂದು ಸಮಾವೇಶದಲ್ಲಿ ನಿರ್ಣಯಿ ಸಲಾಯಿತು.ಮುಖ್ಯ ಅತಿಥಿಗಳಾಗಿ ಎಐಟಿಯುಸಿ ಕಾರ್ಯದರ್ಶಿ ನ್ಯಾಯವಾದಿ ಹಣಮಂತರಾಯ ಅಟ್ಟೂರ,ಕಲಬುರಗಿ ಜಿಲ್ಲಾ ಕಟ್ಟಡ ಕಾರ್ಮಿಕರ ಉಪಾಧ್ಯಕ್ಷರಾದ ಶಿವಲಿಂಗಮ್ಮ ಲೇಂಗಟಿ ಕರ್,ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕು ಕಾರ್ಯದರ್ಶಿಯಾದ ಯಶೋಧಾ ರಾಠೋಡ, ಉಪಾಧ್ಯಕ್ಷರಾದ ಅಂಬಿಕಾ ಸರಡಗಿ ಆಗಮಿಸಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಪದ್ಮಾವತಿ ಇಟಿ, ಕಾರ್ಯದರ್ಶಿಯಾಗಿ ಪಾರ್ವತಿ ಜಾಧವ, ಉಪಾಧ್ಯಕ್ಷರಾಗಿ ಕವಿತಾ ಚವ್ಹಾಣ, ಶರಣಮ್ಮ ಸೋನಾರ, ಸಹ ಕಾರ್ಯದರ್ಶಿಗಳಾಗಿ ಅನೀಲಾವತಿ ಮಾಳೆಗಾಂವ, ಖಾಜಾಬಿ ಚಿಮ್ಮನಚೋಡ, ಖಜಾಂಚಿಯಾಗಿ ಅನಿತಾ ಪದ್ಮಾ ಣಿ,ಹಾಗೂ ತಾಲ್ಲೂಕು ಕಾರ್ಯಕಾರಿ ಸದಸ್ಯರಾಗಿ ಬಸಮ್ಮ ಜಾಂತೆ, ಚಲಿತ್ರಾ ನೂಲ್ಕರ್, ಕವಿತಾ ರಾಠೋಡ, ತೇಜಮ್ಮ ಜೀವಣಗಿ ಆಯ್ಕೆಯಾದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago