ಭಾಲ್ಕಿ: ಆಸಕ್ತಿ ಮತ್ತು ಸತತ ಪ್ರಯತ್ನ ಇದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ. ಜನರ ಅರ್ಥವಿಲ್ಲದ ಮಾತುಗಳಿಗೆ ಕಿವಿಗೊಡದೆ ಶರಣರ ವಚನಗಳು ಅಧ್ಯಯನ ಮತ್ತು ಅನುಷ್ಠಾನಗೈಯುತ್ತ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಜರುಗಿದ 282ನೇ ಮಾಸಿಕ ಶರಣಸಂಗಮ ಕಾರ್ಯಕ್ರಮದ ದಿವ್ಯ ಸನ್ನಿಧಾನ ವಹಿಸಿ ಪೂಜ್ಯ ಶ್ರೀಗಳು ಆಶೀರ್ವಚನಗೈದರು. ಪೂಜ್ಯ ಗುರುಬಸವ ಪಟ್ಟದ್ದೇವರು ದಿವ್ಯ ನೇತೃತ್ವ ವಹಿಸಿದ್ದರು.
ಸನ್ಮಾನ ಸ್ವೀಕರಿಸಿದ ಶರಣೆ ಶಾರದಾ ಮಾಳಗೆ ಅವರು, ಮನುಷ್ಯ ತಾನು ಮೊದಲು ಸಮರ್ಥವಾಗಿ ಬೆಳೆದು ನಂತರದಲ್ಲಿ ತನ್ನ ಸುತ್ತಮುತ್ತಲಿನ ಸಮಾಜ ಸೇವೆ ಮಾಡಬೇಕು. ಇಂದಿಗೂ ಸಮಾಜದಲ್ಲಿ ಮುಖ್ಯವಾಹಿನಿಗೆ ಬರದ ಮಕ್ಕಳು ಬಹಳ ಸಂಖ್ಯೆಯಲ್ಲಿದ್ದಾರೆ. ಅಂಥವರನ್ನು ಗುರುತಿಸಿ ಶಿಕ್ಷಣ ಮತ್ತು ಸಂಸ್ಕಾರ ನೀಡಿ ಬೆಳೆಸುವುದು ಮುಖ್ಯವಾಗಿದೆ ಎಂದು ನುಡಿದರು.
ಬಸವರಾಜ ಮರೆ, ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಸಾಧನೆ ಮಾಡಿದ ಕರಬಸಯ್ಯ ಮಠಪತಿ, ಶಾರದಾ ಮಾಳಗೆ, ಡಾ.ಸಂಜೀವಕುಮಾರ ಜುಮ್ಮಾ, ಶಿವಕುಮಾರ ಲದ್ದೆ ಮತ್ತು ಪ್ರಜ್ವಲ್ ಬಿ. ಶೇರಿಕಾರ ಅವರಿಗೆ ಸನ್ಮಾನಿಸಲಾಯಿತು.
ಅಫಜಲಪೂರ ಬಸವಭಕ್ತರಾದ ಸದಾಶಿವ ಮೇತ್ರೆ, ರಾಜೇಂದ್ರ ನರೋಣ, ಬಸವರಾಜ ಕೆಂಗನಾಳ, ಅಮೃತಪ್ಪ ಪಾಟೀಲ, ಶಿವಪುತ್ರ ಆಲೆಗಾಂವ, ದಯಾನಂದ ನರೋಣ ಅವರು ಉಪಸ್ಥಿತರಿದ್ದರು. ಚಂದ್ರಕಲಾ ಜೋಸೆಫ್ ಭಕ್ತಿದಾಸೋಹ ವಹಿಸಿಕೊಂಡಿದ್ದರು. ಯಲ್ಲನಗೌಡ ಬಾಗಲಕೋಟ, ಶ್ರೀದೇವಿ ಸ್ವಾಮಿ ಅವರಿಂದ ವಚನ ಗಾಯನ ನಡೆಯಿತು. ರಾಜು ಜುಬರೆ ಸ್ವಾಗತಿಸಿದರು. ವೀರಣ್ಣ ಕುಂಬಾರ ನಿರೂಪಿಸಿದರು. ಶಾಂತಯ್ಯ ಸ್ವಾಮಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…