ಬಿಸಿ ಬಿಸಿ ಸುದ್ದಿ

ಹೆಣ್ಣು ಅಬಲೆಯಲ್ಲ ಸಬಲೆ ಎಂದು ತೋರಿಸಿದವರು ಚೆನ್ನಮ್ಮಾ

ಕೆಂಭಾವಿ:ಹೆಣ್ಣು ಅಬಲೆಯಲ್ಲ ಸಬಲೆ. ಹೆಣ್ಣು ಪುರುಷರಿಗಿಂತಲೂ ಯಾವದರಲ್ಲಿಯೂ ಕಮ್ಮಿ ಇಲ್ಲ. ಅಡುಗೆ ಮಾಡುವದಕ್ಕೂ ಬದ್ಧ, ಯುದ್ದಕ್ಕೂ ಸಿದ್ಧ ಎಂದು ತೋರಿಸಿಕೊಟ್ಟವರಲ್ಲಿ ರಾಣಿ ಕಿತ್ತೂರು ಚೆನ್ನಮ್ಮ ಅಗ್ರರು ಎಂದು ಹಿರಿಯ ಮುಖಂಡ ಸಂಗಣ್ಣ ತುಂಬಗಿ ಹೇಳಿದರು.

ಭಾನುವಾರ ವೀರರಾಣಿ ಕಿತ್ತೂರ ಚೆನ್ನಮ್ಮಳ 199 ನೆ ಜಯಂತಿ ಅಂಗವಾಗಿ ಪಟ್ಟಣದ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರ ಚನ್ನಮ್ಮಳ ಸ್ನೇಹಮಯಿ ಜೀವನ, ಧೈರ್ಯ ಸಾಹಸ ಕಾರ್ಯಗಳು ನಮ್ಮ ಭಾರತ ದೇಶದ ಪ್ರತಿಯೊಬ್ಬ ಮಹಿಳೆಗೆ ಆದರ್ಶಪ್ರಾಯವಾಗಿದೆ. ಚೆನ್ನಮ್ಮಳ ಜಯಂತಿ ದಿನವನ್ನು ವಿಜಯೋತ್ಸವ ದಿನವನ್ನಾಗಿ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.

ಮುಖಂಡರಾದ ಪ್ರಕಾಶ (ಗುಂಡುಗೌಡ) ಯಾಳಗಿ, ಶಿವಣ್ಣ ಬಳಬಟ್ಟಿ, ರವಿ ಸೊನ್ನದ, ಶ್ರೀಶೈಲ ಮಲ್ಕಾಪುರ, ಬಸವರಾಜ ಅಂಗಡಿ, ವಿಕಾಸ ಸೊನ್ನದ, ಶರಣಗೌಡ, ಭೀಮು ಮಲ್ಕಾಪುರ, ಚಂದ್ರು ಮನಗೂಳಿ, ಆನಂದ ಆಶಿಂಗಾಳ, ಸೋಮನಾಥ, ಗೌಡಪ್ಪಗೌಡ, ಸಿದ್ದು ಬೈಚಬಾಳ, ಮಂಜು ದೇಸಾಯಿ, ಬಸ್ಸು ಆಶಿಂಗಾಳ, ಸುರೇಶ ತೋಟದ, ಮಹೇಶ ಅಂಗಡಿ, ರೇವಣಸಿದ್ದಯ್ಯ, ಉಮೇಶರೆಡ್ಡಿ, ಹಳ್ಳೆಪ್ಪ, ಸುಭಾಸ, ಸಂತೋಷ, ಹನೀಫ್, ಮಂಜು ತುಂಬಗಿ, ಸತ್ಯರಾಜ, ವೀರೇಶ ಬಂಡೋಳಿ ಸೇರಿದಂತೆ ಇತರರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

51 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

53 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

58 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago