ಆಯುರ್ವೇದ ಸಮಗ್ರ ಆರೋಗ್ಯ ವ್ಯವಸ್ಥೆ

0
25

ಕಲಬುರಗಿ: ಇಂದಿನ ಆಧುನಿಕ ಒತ್ತಡ ಬದುಕಿನಲ್ಲಿ ಆರೋಗ್ಯದೆಡೆಗೆ ನಿಷ್ಕಾಳಜಿ ವಹಿಸಿ, ನಾವೇ ಅನೇಕ ರೋಗಗಳಿಗೆ ಆಹ್ವಾನ ನೀಡುತ್ತಿದ್ದೇವೆ. ಯಾವುದೇ ರೀತಿಯ ಅಡ್ಡ ಪರಿಣಾಮಗಳ್ಳಿಲ್ಲದ, ಸಂಪೂರ್ಣ ಗುಣಮುಖವಾಗುವ ವೈದ್ಯಕೀಯ ಪದ್ಧತಿಯನ್ನು ನಮ್ಮ ಪೂರ್ವಜರು ಸಾವಿರಾರು ವರ್ಷಗಳ ಹಿಂದೆ ನಮಗೆ ನೀಡಿದ್ದಾರೆ. ಜನರು ಇದರ ಬಗ್ಗೆ ಅಲಕ್ಷ್ಯ ಮಾಡಿ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು.

ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪವಿರುವ ‘ಚರಕ ಆಯುರ್ವೇದ ಆಸ್ಪತ್ರೆ’ಯಲ್ಲಿ ಜರುಗಿದ ‘ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಆಯುರ್ವೇದ ತಜ್ಞೆ ಡಾ.ಪ್ರಿಯದರ್ಶಿನಿ ಎಸ್.ಪಾಟೀಲ ಮಾತನಾಡಿ, ಆಯುರ್ವೇದ ವೈದ್ಯಕೀಯ ಪದ್ಧತಿ ಭವಿಷ್ಯದ ದೃಷ್ಟಿಯಿಂದ ಅತ್ಯವಶ್ಯಕವಾಗಿದೆ.

Contact Your\'s Advertisement; 9902492681

ಇಂದಿನ ಆಧುನಿಕ ವಿವಿಧ ವೈದ್ಯಕೀಯ ಪದ್ಧತಿಗಳಿಗಿಂತಲೂ ಉತ್ತಮವಾದ, ಅಡ್ಡ ಪರಿಣಾಮವಿಲ್ಲದ ಚಿಕಿತ್ಸಾ ಪದ್ಧತಿಗೆ ಅನಿವಾರ್ಯವಾಗಿ ಮೊರೆಹೋಗಬೇಕಾಗಿದೆ. ಇದು ನಮ್ಮ ನೆಲದ ಪದ್ಧತಿಯಾಗಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವು ಕೂಡಾ ಹೌದು. ಆಯುರ್ವೇದ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಕಾಯ್ವಾಗಬೇಕಾಗಿದೆ. ಆಯುರ್ವೇದ ಪದ್ಧತಿಗೆ ಧನ್ವಂತರಿ ಅವರ ಕೊಡುಗೆ ಅನನ್ಯವಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ಡಾ.ಸುನೀಲಕುಮಾರ ಎಚ್.ವಂಟಿ, ಎಂ.ಬಿ.ನಿಂಗಪ್ಪ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ ಸೇರಿದಂತೆ ಮತ್ತಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here