ಆಳಂದ ಸಮ್ಮೇಳನ ನ. 5 ರಂದು ಸಕಲ ಸಿದ್ಧತೆ, ನೌಕರರಿಗೆ ಓಡಿ

ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಆಳಂದ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನ.5 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಖಜೂರಿ ತಿಳಿಸಿದ್ದಾರೆ.

ಆಳಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮ್ಮೇಳನ ಅಚ್ಚುಕಟ್ಟಾಗಿ ಶಿಸ್ತು ಬದ್ಧವಾಗಿ ನಡೆಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಅದಕ್ಕೆ ಬೇಕಾದ ಪೂರ್ವ ಸಿದ್ಧತೆಗಳನ್ನು ತಾಲೂಕಿನ ಹಿರಿಯ ಸಾಹಿತಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿ ಮಾಡಿಕೊಳ್ಳಲಾಗಿದೆ. ತಾಲೂಕಿನ ಸಾಹಿತ್ಯ ಆಸಕ್ತರು ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೆಳನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಸಮ್ಮೇಳನವಯ ಬೆಳಿಗ್ಗೆ ರಾಷ್ಟ್ರಧ್ವಜದೊಂದಿಗೆ ಆರಂಭಗೊಂಡು ಮೆರವಣಿಗೆ, ಉದ್ಘಾಟನೆ, ಗೋಷ್ಟಿ, ಕವಿಗೋಷ್ಟಿ, ಗೌರವ ಸನ್ಮಾನ ಹಾಗೂ ಸಮಾರೋಪ ಸಮಾರಂಭದೊಂದಿಗೆ ಸಮ್ಮೇಳನ ಸಂಪನ್ನಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಇದೆ ಸಂದರ್ಭದಲ್ಲಿ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಬಾಕ್ಸ್: ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಶಿಕ್ಷಕರಿಗೆ ಓಡಿ ಸೌಲಭ್ಯ ಇರುತ್ತದೆ ಆದ್ದರಿಂದ ಸಾಹಿತ್ಯ ಆಸಕ್ತ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು- ಹಣಮಂತ ಶೇರಿ, ಅಧ್ಯಕ್ಷ, ಕಸಾಪ, ಆಳಂದ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420