ವಾಡಿ: ಬೆಳ್ಳಿ ಸಂಭ್ರಮ ಆಚರಿಸಿಕೊಳ್ಳುತ್ತಿರುವ ದಲಿತ ಸಾಹಿತ್ಯ ಪರಿಷತ್ ಇದೇ ಅ.30 ರಂದು ನರಗುಂದಾ ಭೈರನಹಳ್ಳಿಯಲ್ಲಿ ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದು, ತನ್ನಿಮಿತ್ತ ನಾಡಿನ ವಿವಿಧ ಜಿಲ್ಲೆಗಳ 25 ಜನ ಗಜಲ್ ಕವಿಗಳನ್ನು ಗುರುತಿಸಿ ರಾಜ್ಯ ಮಟ್ಟದ ‘ಗಜಲ್ ಸಾಹಿತ್ಯ ಪ್ರಶಸ್ತಿ’ ಪ್ರಕಟಿಸಿದೆ.
ಕಲಬುರಗಿ ಜಿಲ್ಲೆಯಿಂದ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ನಿವಾಸಿ, ಕಲಬುರಗಿ ಎನ್.ವಿ.ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಮಲ್ಲಿನಾಥ ಎಸ್.ತಳವಾರ ಅವರನ್ನು ಗಜಲ್ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರ ಗಜಲ್ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…