ಬಿಸಿ ಬಿಸಿ ಸುದ್ದಿ

ಕರವೇ ರಾಜ್ಯೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ ನಾರಾಯಣಗೌಡ ಬಣ) ನವೆಂಬರ್ 1 ರಂದು ಹಮ್ಮಿಕೊಂಡಿರುವ ಕರವೇ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಸಲಾಯಿತು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ವೇದಿಕೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ,ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ) ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ 18ನೇ ವರ್ಷದ ಕರವೇ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ಆವರಣದಲ್ಲಿ ವಿಜೃಂಭಣೆಯಿಂದ ಅಚರಿಸಲಾಗುವುದು.

ಪ್ರತಿ ವರ್ಷ ರಾಜ್ಯೋತ್ಸವ ಕಾರ್ಯಕ್ರಮವನ್ನು ಸುರಪುರ ಉತ್ಸವವಾಗಿ ಆಚರಿಸುತ್ತಾ ಬಂದಿದ್ದು ಕಳೆದ ಎರಡು ವರ್ಷಗಳಿಂದ ಕೋವಿಡ್ ಪ್ರಯುಕ್ತ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿತ್ತು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದ ಅವರು ಕಾರ್ಯಕ್ರಮಗಳ ಪ್ರಯುಕ್ತ ಬೆಳಿಗ್ಗೆ 11ಗಂಟೆಗೆ ಶ್ರೀ ಭುವನೇಶ್ವರಿದೇವಿ ಭಾವಚಿತ್ರದ ಶೋಭಾಯಾತ್ರೆ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪ್ರಾರಂಭಗೊಂಡು ನಗರದ ಪ್ರಮುಖ ರಸ್ತೆಗಳ ಮೂಲಕ ವೇಣುಗೋಪಾಲಸ್ವಾಮಿ ದೇವಸ್ಥಾನ ಆವರಣದವರೆಗೆ ನಡೆಯಲಿದೆ ಮೆರವಣಿಗೆಯಲ್ಲಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸ ಕಲಾವಿದರ ಸಾಂಸ್ಕøತಿಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಜಾನಪದ ತಂಡಗಳು ಹಾಗೂ ನಗರದ ವಿವಿಧ ಶಾಲೆಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಶೋಭಾಯಾತ್ರೆ ಮೆರವಣಿಗೆಯನ್ನು ಸುರಪುರ ಸಂಸ್ಥಾನದ ಅರಸು ವಂಶಸ್ಥರಾದ ರಾಜಾ ಕೃಷ್ಣಪ್ಪ ನಾಯಕ ಹಾಗೂ ಶಾಸಕ ನರಸಿಂಹ ನಾಯಕ(ರಾಜುಗೌಡ) ಶೋಭಾಯಾತ್ರೆಗೆ ಚಾಲನೆ ನೀಡುವರು, ಮದ್ಯಾಹ್ನ 1.30ಕ್ಕೆ ಅಂತರ ಶಾಲಾ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜಾ ಮುಕುಂದ ನಾಯಕ ಉದ್ಘಾಟಿಸುವರು ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಅಧ್ಯಕ್ಷತೆ ವಹಿಸುವರು ಮುಖ್ಯ ಅತಿಥಿಗಳಾಗಿ ಉತ್ತರಾದೇವಿ ಮಠಪತಿ, ಪ್ರಕಾಶ ಸಜ್ಜನ್, ಮಹೇಶ ಪಾಟೀಲ, ಪ್ರಕಾಶ ಗುತ್ತೇದಾರ, ಗೋಪಾಲದಾಸ ಲಡ್ಡಾ, ರಾಜಾ ಪಿಡ್ಡ ನಾಯಕ(ತಾತಾ), ಸೋಮನಾಥ ಡೊಣ್ಣಿಗೇರಿ ಆಗಮಿಸುವರು.

ಸಾಯಂಕಾಲ 6ಗಂಟೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಯದ ಸಾಧಕರಿಗೆ ಕುವೆಂಪು ಪ್ರಶಸ್ತಿ ಪ್ರದಾನ ಹಾಗೂ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಿವಮೂರ್ತಿ ಶಿವಾಚಾರ್ಯರು ಜಡೆ ಶಾಂತಲಿಂಗೇಶ್ವರ ದೇವಾಪುರ ಹಾಗೂ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಮರಡಿ ಮಲ್ಲಿಕಾರ್ಜುನ ದೇವಸ್ಥಾನ ಲಕ್ಷ್ಮೀಪುರ ಸಾನಿಧ್ಯ ವಹಿಸುವರು.

ಅರಸು ವಂಶಸ್ಥರಾದ ರಾಜಾ ಕೃಷ್ಣಪ್ಪ ನಾಯಕ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸುವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರಸಿಂಹ ನಾಯಕ(ರಾಜುಗೌಡ) ಉದ್ಘಾಟಿಸುವರು ಮುಖಂಡ ರಾಜಾ ಹನುಮಪ್ಪ ನಾಯಕ(ತಾತಾ) ಅಧ್ಯಕ್ಷತೆ ವಹಿಸುವರು ಕರವೇ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಪಡುಕೋಟೆ, ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ, ಸುರೇಶ ಸಜ್ಜನ್, ಕಿಶೋರಚಂದ ಜೈನ, ವೇಣುಮಾಧವ ನಾಯಕ, ಬಲಭೀಮನಾಯಕ ಭೈರಿಮರಡಿ, ಮಲ್ಲಿಕಾರ್ಜುನ ಸತ್ಯಂಪೇಟ, ಯಲ್ಲಪ್ಪ ನಾಯಕ ಹಿರೇಮನಿ, ನರಸಿಂಹಕಾಂತ ಪಂಚಮಗಿರಿ, ಮನಪ್ಪ ಚಳ್ಳಿಗಿಡ, ಸರೋಜಾ ಬಸವರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರರಲಿದ್ದಾರೆ ಎಂದು ತಿಳಿಸಿದರು.

ನಾಡಿನ ಟಿವಿ ಷೋ ಕಲಾವಿದರಾದ ಸರಿಗಮಪ ಖ್ಯಾತಿಯ ಸುಹಾನ ಸೈಯದ್, ಕಾಮಿಡಿ ಕಿಲಾಡಿ ಖ್ಯಾತಿಯ ಅಪ್ಪಣ್ಣ ಹಾಗೂ ಜ್ಯೂನಿಯರ್ ಉಪೇಂದ್ರ ಹಾಗೂ ಸ್ಥಳೀಯ ಸಂಗೀತ ಕಲಾವಿದರನ್ನೊಳಗೊಂಡ ವಿವಿಧ ಕಲಾತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿವೆ ಎಂದು ಅವರು ಹೇಳಿದರು.

ಕರವೇ ಪ್ರಮುಖರಾದ ಭೀಮುನಾಯಕ ಮಲ್ಲಿಬಾವಿ, ಶ್ರೀನಿವಾಸ ನಾಯಕ ಬೈರಿಮಡ್ಡಿ, ಪ್ರ ಕಾರ್ಯದರ್ಶಿ ಹಣಮಗೌಡ ಶಖಾಪುರ, ಹಣಮಂತ ಹಾಲಗೇರಿ, ರಂಗನಾಥ ಬಿರಾದಾರ, ಸೋಮಯ್ಯ ಹಾಲಗೇರಾ, ಆನಂದ ಮಾಚಗುಂಡಾಳ, ಪ್ರಕಾಶ ಹೆಗ್ಗನದೊಡ್ಡಿ, ಶ್ರೀಶೈಲ ಕಾಚಾಪುರ, ಶ್ರೀನಿವಾಸ ಲಕ್ಷ್ಮೀಪುರ, ಅಯ್ಯಣ್ಣ ವಗ್ಗಾಲಿ ಇನ್ನೀತರರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

6 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago