ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪಿಯು ವಾಣಿಜ್ಯ, ವಿಜ್ಞಾನ, ಪದವಿ ವಿಜ್ಞಾನ, ಡಿ.ಇಡಿ ಹಾಗೂ ಇಂಗ್ಲಿಷ್ ಮಾಧ್ಯಮದ ಸುಮಾರು 5 ಸಾವಿರ ವಿದ್ಯಾರ್ಥಿಗಳು ಏಕಕಾಲಕ್ಕೆ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನ್ನಡಾಭಿಮಾನವನ್ನು ಮೆರೆದರು.
ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಕನ್ನಡ ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಲಿಂ.ಡಾ.ಚನ್ನಬಸವ ಪಟ್ಟದ್ದೇವರು ಜೀವನ ಪರ್ಯಂತ ಶ್ರಮಿಸಿದ್ದರು. ಅವರ ಪ್ರಯತ್ನದ ಫಲವಾಗಿ ನಮ್ಮ ಭಾಗ ಕರ್ನಾಟಕದಲ್ಲಿದೆ. ಅನ್ಯ ಭಾಷೆಗಳನ್ನು ದ್ವೇಷಿಸಬಾರದು. ಆದರೆ, ಮಾತೃ ಭಾಷೆಯಾದ ಕನ್ನಡವನ್ನು ಸರ್ವರೂ ಅಪ್ಪಿಕೊಂಡು, ನಿತ್ಯ ಮಾತನಾಡುವುದರ ಮೂಲಕ ಕನ್ನಡ ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ್ ಮೊಳಕೀರೆ, ಜಯಕ್ಕಾ ಗಾಂವ್ಕರ್ ಸೇರಿದಂತೆ ಎಲ್ಲ ವಿಭಾಗದ ಮುಖ್ಯಸ್ಥರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…