ಹೈದರಾಬಾದ್ ಕರ್ನಾಟಕ

ಮುಗಿಲೆತ್ತರಕ್ಕೆ ಮೊಳಗಿದ ಕೋಟಿ ಕಂಠ ಗಾಯನ

ಕಲಬುರಗಿ: ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಮುಗಿಲೆತ್ತರಕ್ಕೆ ಮೊಳಗಿತು.

ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ನಡೆಯುವ ವಿವಿಧ ಶಾಲಾ ಕಾಲೇಜು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದ ತಂಡೊಪತಂಡವಾಗಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಸೇರಿದ್ದರು.

ಬೆಳಿಗ್ಗೆ ಮಕ್ಕಳು ಬಹಳ ಹುಮ್ಮಸ್ಸಿನಿಂದ ಮೈದಾನದಲ್ಲಿ ಸೇರಿ ಕೈಯಲ್ಲಿ ಕನ್ನಡ ಧ್ವಜ ಹಿಡಿದು ರಾರಾಜಿಸುತ್ತ ಅಚ್ಚುಕಟ್ಟಾಗಿ ನಿಂತು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದರು. ಇದರಿಂದ ಇಡೀ ಮೈದಾನವೇ ಕನ್ನಡಮಯವಾಗಿತ್ತು. ಅಥಿತಿಗಳೊಂದಿಗೆ ಕೋಟಿ ಕಂಠ ಗಾಯನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡುವಾಗ ಮೈನವಿರೇಳಿಸುವಂತಿತ್ತು.

“ಮಾತಾಡ್ ಮಾತಾಡ್ ಕನ್ನಡ”À ಹಾಗೂ “ನನ್ನ ನಾಡು ನನ್ನ ಹಾಡು” ಶೀರ್ಷಿಕೆಯಡಿ ಕೋಟಿ ಕಂಠ ಗಾಯನ ಕಾರ್ಯಕ್ರಮ ವಿಜ್ರಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದಲ್ಲಿ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎನ್ನುವ ಆರು ಕನ್ನಡ ಗೀತೆಗಳನ್ನು ಹರ್ಷೋದ್ಗಾರದಿಂದ ಎಲ್ಲರೂ ಸೇರಿ ಹಾಡಿದರು. ನಂತರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಸಂಕಲ್ಪ ವಿಧಿಯನ್ನು ಬೋಧಿಸಿದರು.

ಈ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ಶಾಸಕರಾದ ದತ್ತಾತ್ರೇಯ ಸಿ ಪಾಟೀಲ ರೇವೂರ, ಶಶೀಲ ಜಿ ನಮೋಶಿ, ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್, ಜಿಲ್ಲಾ ಪಂಚಾಯತ್‍ನ ಸಿ.ಇ.ಓ. ಡಾ. ಗಿರೀಶ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತ ಪಾಟೀಲ ಭುವನೇಶ ದೇವಿದಾಸ, ತಹಸೀಲದಾರರಾದ ಪ್ರಕಾಶ ಕುದರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಗರಿಮಾ ಪಂವಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿದಂತೆ ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪ್ರೊ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಅನಿಲ ಕುಮಾರ ಬಿಡವೆ, ಡೀನ್ ಲಕ್ಷ್ಮೀ ಪಾಟೀಲ ಮಾಕಾ ಹಾಗೂ ಹಣಕಾಸು ಅಧಿಕಾರಿ ಕಿರಣ್ ಮಾಕಾ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago