ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ವಿರಾಟ್ ಸಮಾವೇಶ 30ರಂದು

ಕಲಬುರಗಿ: ಅ.30ರಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಶಾಸಕ ರಾಜಕುಮಾರ ಪಾಟೀಲ ಸೇಡಂ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಕೆಸರಟಗಿ ಬಳಿಯ ರದ್ದೇವಾಡಗಿ ಲೇಔಟ್‍ನಲ್ಲಿ ಸಮಾವೇಶ ನಡೆಯಲಿದ್ದು, ಈಗಾಗಲೇ ಸಮಾವೇಶದ ವೇದಿಕೆ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ. ಒಟ್ಟು 100 ಎಕರೆ ಪ್ರದೇಶದಲ್ಲಿ ಪೆಂಡಾಲಿನ ವ್ಯವಸ್ಥೆ ಮಾಡಲಾಗಿದೆ. 2.5 ಲಕ್ಷ ಜನರಿಗೆ ಕುಳಿತು ಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ 224 ವಿಧಾನ ಸಭಾ ಮತಕ್ಷೇತ್ರದಿಂದ 200ಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಜಾತಿ, ಪಂಗಡ ಸಮುದಾಯದ ಮುಖಂಡರು ಸೇರಿದಂತೆ 5 ಲಕ್ಷಕ್ಕೂ ಜನ ಭಾಗವಹಿಸಲಿದ್ದಾರೆ. ಎಲ್ಲರನ್ನೂ ಸ್ವಾಗತಿಸಲು ಕಲಬುರಗಿ ಸಿದ್ಧವಾಗಿದೆ ಎಂದು ಶುಕ್ರವಾರ ಸುದಿಗೋಷ್ಠಿಯಲ್ಲಿ ತಿಳಿಸಿದರು.

ಸಮಾವೇಶಕ್ಕೆ ಆಗಮಿಸುವ ಜನರಿಗೆ 4 ಸಾವಿರ ಬಸ್ ಹಾಗೂ 20 ಸಾವಿರ ನಾಲ್ಕು ಚಕ್ರದ ವಾಹದ ವ್ಯವಸ್ಥೆ ಮಾಡಲಾಗಿದೆ. ಸಾವಿರಕ್ಕೂ ಅಧಿಕ ಹಿಂದುಳಿದ ವರ್ಗದ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಅವರಿಗೆ ನಗರದ ಹೋಟೆಲ್ ನಲ್ಲಿ ಹಾಗೂ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಜನರಿಗೆ ನಗರದಲ್ಲಿ 50 ಕಲ್ಯಾಣ್ ಮಂಟಪಗಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಜೇವರ್ಗಿ, ರಾಯಚೂರು ನಲ್ಲಿಯೂ ವ್ಯವಸ್ಥೆ ಮಾಡಲಾಗಿದೆ ತಿಳಿಸಿದರು.

ಶಾಸಕರಾದ ಶಶೀಲ್ ಜಿ. ನಮೋಶಿ, ದತ್ತಾತ್ರೇಯ ಪಾಟೀಲ, ಬಿ.ಜಿ. ಪಾಟೀಲ, ಡಾ. ಅವಿನಾಶ ಜಾಧವ, ಪಕ್ಷದ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಬಿಜೆಪಿ ಗ್ಗರಾಮೀಣ ಅರ್ಧಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಇತರರಿದ್ದರು.

ದಕ್ಷಿಣ ಭಾರತದಲ್ಲೇ ಇದೆ ಪ್ರಥಮ ಬಾರಿಗೆ ಹಿಂದುಳಿದ ವರ್ಗದವರ ಅತಿ ದೊಡ್ಡ ಸಮಾವೇಶ ಇದಾಗಿದೆ.  ಸಮಾವೇಶ ಯಶಸ್ವಿಗೆ 8 ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಿವೆ. ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಕಲಬುರಗಿಒಯಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ರಾಜ್ಯದ 224 ಮತ  ಕ್ಷೇತ್ರಗಳಿಂದ 312 ಮಂಡಲಗಳ ಪ್ರಮುಖರು ಭಾಗವಹಿಸಲಿದ್ದಾರೆ. -ನೆ.ಲ. ನರೇಂದ್ರ ಬಾಬು, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420