ಕಲಬುರಗಿ: ರಾಜ್ಯ ಸರಕಾರದ ನಿರ್ದೇಶನದಂತೆ 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿ ಕಂಠ ಗಾಯನ ಜಿಮ್ಸ ಆಸ್ಪತ್ರೆಯ ಆವರಣದಲ್ಲಿ ನನ್ನ ನಾಡು ನನ್ನ ಹಾಡು ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಮ್ಸ ಸಂಸ್ಥೆಯ ಆಸ್ಪತ್ರೆಯ ವಿವಿಧ ವೃಂದದ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಮತ್ತು ನರ್ಸಿಂಗ ಕಾಲೇಜಿನ ವಿದ್ಯಾರ್ಥಿಗಳು, ಬೋಧಕರು, ಇತರೆ ಸುಮಾರು 500ಕ್ಕೂ ಮೇಲ್ಪಟ್ಟು ಸಿಬ್ಬಂದಿಗಳು ಭಾಗವಹಿಸಿದ್ದರು.
ಸಂಸ್ಥೆಯ ನಿರ್ದೇಶಕರಾದ ಡಾ.ಕವಿತಾ ಪಾಟೀಲ, ವೈದ್ಯಕೀಯ ಅಧೀಕ್ಷರಾದ ಡಾ.ಮಹ್ಮದ ಶಫಿಯುದ್ದೀನ ಜಿಮ್ಸ ಪ್ರಾಂಶುಪಾಲರಾದ ಡಾ.ಉಮೇಶ ಎಸ್.ಆರ. ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರು,ಡಾ.ಅಂಬಾರಾಯ ರುದ್ರವಾಡಿ, ಸ್ಥಳೀಯ ವೈದ್ಯಾಧಿಕಾರಿಗಳು ಡಾ.ನಾಗರಾಜ ಪಾಟೀಲ, ಡಾ.ರಘುನಾಥ, ಶೈಕ್ಷಣಿಕ ಕುಲಸಚಿವರಾದ ಡಾ.ಫರಖಾನಾ ಖುಶನೂದ, ಮುಖ್ಯ ಆಡಳಿತಾಧಿಕಾರಿಗಳು ಶ್ರೀ ವೀರಣ್ಣ, ಸಹಾಯಕ ಆಡಳಿತಾಧಿಕಾರಿ ಶ್ರೀ ಮಲ್ಲಿಕಾರ್ಜುನ, ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವೈದ್ಯಾಧಿಕಾರಿಗಳು ಭಾಗ ವಹಿಸಿ ಸರಕಾರ ಸೂಚಿಸಿದ ಆರು ಹಾಡುಗಳನ್ನು ಸಮೂಹ ಗಾಯನದೊಂದಿಗೆ ಹಾಡಿದರು ಹಾಗೂ ಅಪರೂಪದ ಈ ಐತಿಹಾಸಿಕ ಕ್ಷಣದ ನನ್ನ ನಾಡು ನನ್ನ ಹಾಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕರು ಕನ್ನಡ ನಾಡು ನುಡಿ ಸಂಸ್ಕøತಿ ಹಾಗೂ ಭಾಷಾ ಅಭಿವೃದ್ಧಿಗೆ ಕರೆ ನೀಡಿ ಸಂಕಲ್ಪವಿಧಿ ಬೋಧಿಸಿದರು. ಹಾಗೂ ಕನ್ನಡವನ್ನು ಹೆಚ್ಚು ಹೆಚ್ಚು ಬಳಸಿ ಬೆಳೆಸಲು ಜಿಲ್ಲಾ ಶಸ್ತ್ರಜ್ಞರು ಕರೆ ನೀಡಿದರು. ಕನ್ನಡವನ್ನು ಕಚೇರಿಯಲ್ಲಿ ಕಡ್ಡಾಯವಾಗಿ ಬಳಸಲು ಮುಖ್ಯ ಆಡಳಿತಾಧಿಕಾರಿಗಳು ಸೂಚಿಸಿದರು. ಭಾಗವಹಿಸಿದ ಇತರೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ವಂದನಾರ್ಪಣೆ ಸಲ್ಲಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…