ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ: ಅಲ್ಲಾಉದ್ದೀನ್ ಸಾಗರ

0
59

ಕಲಬುರಗಿ: ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗ ಮಾಡಿಕೊಂಡು ಚೆನ್ನಾಗಿ ಅಧ್ಯಯನ ಮಾಡಿ, ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿ ಉನ್ನತವಾದ ಸಾಧನೆಯನ್ನು ಮಾಡಬೇಕು ಎಂದು ಪ್ರಾಚಾರ್ಯ ಮೊಹಮ್ಮದ್ ಅಲ್ಲಾಉದ್ದೀನ್ ಸಾಗರ ವಿದ್ಯಾಥಿಗಳಿಗೆ ಸಲಹೆ ನೀಡಿದರು.

ಜೇವರ್ಗಿ ಪಟ್ಟಣದ ಬಸವೇಶ್ವರ ಚೌಕ್ ಹತ್ತಿರವಿರುವ ‘ಸರ್ಕಾರಿ ಪಿಯು ಕಾಲೇಜ್’ನಲ್ಲಿ ಶುಕ್ರವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲಾದ ಉಚಿತ ನೋಟಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Contact Your\'s Advertisement; 9902492681

ಶಿಕ್ಷಣ ರಾಷ್ಟ್ರದ ಅಭಿವೃದ್ಧಿಯ ಚಾಲನಾ ಶಕ್ತಿ. ಶಿಕ್ಷಣವು ವ್ಯಕ್ತಿಗೆ ಜ್ಞಾನ, ಬುದ್ಧಿ, ಕೌಶಲ್ಯಗಳನ್ನು ನೀಡುವ ಮೂಲಕ ದೇಶದ ಸದೃಢ ಮಾನವ ಸಂಪನ್ಮೂಲವನ್ನಾಗಿಸುತ್ತದೆ. ಇದನ್ನು ಮನಗಂಡು ಸರ್ಕಾರಗಳು ಶಿಕ್ಷಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ವೆಚ್ಚ ಮಾಡುತ್ತಿವೆ. ವಿದ್ಯಾರ್ಥಿಗಳು ಯೋಜನೆಗಳನ್ನು ಬಳಸಿಕೊಂಡು ಶಿಕ್ಷಣ ಪಡೆದ ನೀವು, ಮುಂದೆ ಸಮಾಜಕ್ಕೆ ಒಳಿತಾಗುವ ಅಭಿವೃದ್ಧಿ ಕಾರ್ಯಗಳಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಎಚ್.ಬಿ.ಪಾಟೀಲ, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಎ.ಪಾಟೀಲ, ರೇಣುಕಾ ಚಿಕ್ಕಮೇಟಿ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ನಿಯೋಜಿತ ಉಪನ್ಯಾಸಕರಾದ ಸಿದ್ದಾರೂಢ ಬಿರಾದಾರ, ದೇವೇಂದ್ರಪ್ಪ ಬಡಿಗೇರ್, ಅತಿಥಿ ಉಪನ್ಯಾಸಕರಾದ ಮಂಜುನಾಥ, ರಂಜಿತಾ ಠಾಕೂರ, ನುಝಹತ್ ಪರ್ವಿನ್, ಸಮೀನಾ ಬೇಗಂ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here