ಮಳವಳ್ಳಿ,(ಮಂಡ್ಯ): ಪುರಸಭೆ ವ್ಯಾಪ್ತಿಯಲ್ಲಿರುವ ಉದ್ದಿಮೆ ಅಂಗಡಿ ಮುಂಗಟ್ಟುಗಳು ಆಂಗ್ಲಬಾಷೆಯಲ್ಲಿರುವ ಅಥವಾ ಅನ್ಯಬಾಷೆಯಲ್ಲಿರುವ ನಾಮಫಲಕಗಳನ್ನು ಕೂಡಲೆ ತೆರೆವುಗೊಳಿಸಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ತಾಕಿತು ಮಾಡಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರಮೇಶ್ ಕೆ.ಟಿ.ಆರ್ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಪುರಸಭೆ ವ್ಯಾಪ್ತಿಯಲ್ಲಿ ಬರುವಂತಹ ಅಂಗಡಿಗಳು ಉದ್ದಿಮೆಗಳು, ಕಛೇರಿಗಳ ನಾಮ ಫಲಕಗಳು, ಇಂಗ್ಲೀಷ್ ಮಯವಾಗಿದ್ದು. ಉದ್ದಿಮೆದಾರರು ಕನ್ನಡದ ಬರಹಕ್ಕೆ ಹೆಚ್ಚಿಗೆ ಆದ್ಯತೆಯನ್ನು ಕೊಟ್ಟಿರುವುದಿಲ್ಲ. ಎಂದು ಆರೋಪಿಸಿ, ಸರ್ವೊಚ್ಚನ್ಯಾಯಾಲಯದ ಆದೇಶದ ಪ್ರಕಾರ ರಾಜ್ಯಗಳ ಸ್ಥಳೀಯ ಭಾಷೆಗಳಿಗೆ ಶೇಕಡ 70% ಆದ್ಯತೆಯನ್ನು ಕೊಡಬೇಕಾಗಿದ್ದು, ಆದರೆ ಈ ನಿಯಮ ತಾಲ್ಲೂಕಿನಲ್ಲಿ ಪಾಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ವ್ಯಾಪ್ತಿಯಲ್ಲಿರುವ ಉದ್ದಿಮೆ ಅಂಗಡಿ ಮುಂಗಟ್ಟುಗಳು ಆಂಗ್ಲಬಾಷೆಯಲ್ಲಿರುವ ಅಥವಾ ಅನ್ಯಬಾಷೆಯಲ್ಲಿರುವ ನಾಮಫಲಕ ಕೂಡಲೆ ತೆರೆವುಗೊಳಿಸಿ, ಕನ್ನಡದಲ್ಲಿ ನಾಮಫಲಕ ಅಳವಡಿಸಕೊಳಲು ತಾಕಿತು ಮಾಡಬೇಕೆಂದು ಒತ್ತಾಯಿಸಿ, ಮುಂದೆ ಉದ್ದಿಮೆಗಳಿಗೆ ಪರವಾನಗಿ ಕೊಡುವ ಮುನ್ನವೇ ಅಥವಾ ಪರವಾನಗಿಯ ಷರತ್ತುಗಳಲ್ಲಿ ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ಕೊಡಬೇಕೆಂದು ನಮೂದಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಕಾರ್ಯಧ್ಯಕ್ಷ ಜಿತೇಂದ್ರ ಕುಮಾರ, ಪ್ರಧಾನ ಕಾರ್ಯದರ್ಶಿ ಗುರುಸಿದ್ದಯ್ಯ, ಉಪಾಧ್ಯಕ್ಷ ಎಚ್.ಇ ಚಂದ್ರಶೇಖರ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…