ಕಲಬುರಗಿ: ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೇಂದ್ರ ಸರ್ಕಾರದ ಆದೇಶ ನೀಡಿದರು, ರಾಜ್ಯ ಸರಕಾರ ಮಾತ್ರ ನೀಡುತ್ತಿರಲ್ಲ. ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ತಳವಾರ ಸಮಾಜದ ಮುಖಂಡರ ದಶಕಗಳಿಂದ ಹೋರಾಟ ನಡೆಸಿದರು. ಇವರ ಹೋರಾಟಕ್ಕೆ ರಾಜ್ಯ ಸರಕಾರ ಕೊನೆಗೂ ತಳವಾರ ಸಮಾಜವನ್ನು ಎಸ್ಟಿಗೆ ಸೇರಿಸಿ ಶನಿವಾರ ಆದೇಶ ಹೋರಡಿಸಿದೆ.
ಈ ಕುರಿತು ಪ್ರತಿಕ್ರಿಯೇ ನೀಡಿದ ತಳವಾರ ಸಮಾಜದ ಹೋರಾಟಗಾರರಾದ ರಾಜೇಂದ್ರ ರಾಜವಾಳ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೇಯೂ ಎಸ್ಟಿ ಪ್ರಮಾಣ ಪತ್ರ ನೀಡುವುದಾಗಿ ಹೇಳಿ ಮಾತು ತಪ್ಪಿದರು. ಇವರ ಅದೇಶ ಕೇವಲ ಹೆಸರಿಗೆ ಮಾತ್ರ ಮಾಡಿರುವ ಬಗ್ಗೆ ಅನುಮಾನವಿದ್ದು, ಕಲ್ಯಾಣ ಕರ್ನಾಟಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ತಳವಾರದ ಕೆಲವರಿಗೆ ಎಸ್ಟಿಗೆ ಪ್ರಮಾಣ ಪತ್ರವನ್ನು ನೀಡುವ ಮೂಲಕ ಚಾಲನೆ ನೀಡಬೇಕೆಂದು ರಾಜ್ಯ ತಳವಾರ ಸಮಾಜದ ಹೋರಾಟ ಸಮಿತಿಯ ಮುಖಂಡರಾದ ರಾಜೇಂದ್ರ ರಾಜವಾಳ್ ಅವರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಪ್ರಮಾಣ ಪತ್ರ ಮಾಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಈ ಆದೇಶವು ಪಾಲನೆ ಆಗುವುದಿಲ್ಲ. ಸಿಎಂ ಸಾಂಕೇತಿಕವಾಗಿ ಪ್ರಮಾಣ ಪತ್ರ ನೀಡುವ ವರೆಗೆ ಹೋರಾಟ ಮುಂದುವರೆಸಲಾಗುವುದೆಂದು ಅವರು ಮಾಹಿತಿ ನೀಡಿದ್ದಾರೆ.
ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವ ಭರವಸೆ ನೀಡಿರುವ ಬೊಮ್ಮಾಯಿ ಅವರು ಕೊಟ್ಟ ಮಾತು ಈಡೇರಿಸಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ವಿಮೋಚನಾದಿನದ ಅಮೃತ್ ಮಹೋತ್ಸವದಲ್ಲಿ ಕಾರ್ಯಕ್ರಮಕ್ಕೆ ಕಲಬುರಗಿಗೆ ಆಗಮಿಸಿದ ಸಿಎಂಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಲಾಗಿತ್ತು. ಕಲಬುರಗಿಗೆ ಆಗಮಿಸುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವುದಾಗಿ ತಳವಾರ ಸಮಾಜದ ಮುಖಂಡರು ಇತ್ತೀಚಿಗೆ ಸರಕಾರಕ್ಕೆ ಎಚ್ಚರಿಕೆ ನೀಡಿದರು.