ಕಲಬುರಗಿ: ಅನೇಕ ಯುವಕರು ಸರ್ಕಾರಿ ನೌಕರಿಗಾಗಿಯೇ ವಯಸ್ಸು ಸವೆಸಿ, ನೌಕರಿ ದೊರೆಯದೆ ನಿರುದ್ಯೋಗಿಗಳಾಗುತ್ತಿದ್ದಾರೆ. ಸರ್ಕಾರ ಎಲ್ಲರಿಗೂ ನೌಕರಿ ನಿಡಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು, ನೀವು ಸೂಕ್ತ ತರಬೇತಿ, ಅನುಭವ ಪಡೆದು ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ, ಉದ್ಯಮಪತಿಯಾಗಿ ಉದ್ಯೋಗವನ್ನು ನೀಡುವ ಕಾರ್ಯ ಮಾಡಬೇಕು. ಕೈಗಾರಿಕೆಗಳ ಸ್ಥಾಪನೆಯಿಮದ ಪ್ರತ್ಯಕ್ಷ, ಪರೋಕ್ಷವಾಗಿ ಅನೇಕ ಉದ್ಯೋಗಾವಕಾಶಗಳು, ವ್ಯಾಪಾರ, ವಹಿವಾಟು ವೃದ್ಧಿಯಾಗುತ್ತದೆ ಎಂದು ಎಮ್ಮೆಲ್ಸಿ ಶಶೀಲ್ ಜಿ.ನಮೋಶಿ ಅಭಿಮತಪಟ್ಟರು.
ನಗರದ ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕೆ ಪ್ರದೇಶದಲ್ಲಿ ನೂತನವಾಗಿ ಸ್ಥಾಪನೆಯಾದ ‘ಶ್ರೀ ಸಾಯಿ ಪ್ರಸಾದ ಕೈಗಾರಿಕೆ’ಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕೈಗಾರಿಕೆ ಮುಖ್ಯಸ್ಥ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ನಮ್ಮ ಭಾಗದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳ ಸ್ಥಾಪನೆಯಾಗಬೇಕಾಗಿದೆ. ಸರ್ಕಾರದ ಸೂಕ್ತ ಯೋಜನೆಗಳನ್ನು ಸದುಪಯೋಗಪಡೆಸಿಕೊಳ್ಳಬೇಕು. ಇದಕ್ಕೆ ಬ್ಯಾಂಕುಗಳು ಸಾಲ ಸೌಲಭ್ಯಗಲ ಪ್ರಮಾಣ ಹೆಚ್ಚಿಸಬೇಕು. ಸರ್ಕಾರದ ಸೌಲಭ್ಯಗಳಿಂದ ಪಡೆದ ಆರ್ಥಿಕ ಸಹಾಯ ಅನಾವಶ್ಯಕವಾಗಿ ವೆಚ್ಚ ಮಾಡದೆ, ನಿರಂತರವಾಗಿ ಶ್ರಮಿಸಬೇಕು. ಸಮಯ, ಕಾಯಕಪ್ರಜ್ಞೆ, ಯೋಜನಾಬದ್ದತೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ ಕೈಗಾರಿಕೆಗಳು ಸಫಲವಾಗಲು ಸಾಧ್ಯವಾಗುತ್ತವೆ ಎಂಬ ಅರಿವಿನೊಂದಿಗೆ ಇದನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಯಶಸ್ಸು ಪಡೆಯಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬೌದ್ಧ ಧಾರ್ಮಿಕ ಮುಖಂಡೆ ಪೂನಾದ ಸುಮನಾ ಭಂತೇಜಿ, ಇಸ್ಲಾಂ ಧಾರ್ಮಿಕ ಮುಖಂಡ ಆದಾಮ್ ಅಲಿ ಬಾಬಾ, ಪ್ರಮುಖರಾದ ಜಯಶ್ರೀ ಎಚ್.ವಂಟಿ, ಸುಜಯ್, ಸಾಯಿ ಪ್ರಸಾದ, ಎಂ.ಬಿ.ನಿಂಗಪ್ಪ, ಬಿ.ವಿ.ಚಕ್ರವರ್ತಿ, ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ಡಾ.ಸದಾನಂದ ಪಾಟೀಲ, ರಾಜಕುಮಾರ ಕೋರಿ, ಬಸವರಾಜ ಎಸ್.ಪುರಾಣೆ, ರಾಜಕುಮಾರ ಬಟಗೇರಿ, ಸಿದ್ದಾರ್ಥ ಚಿಮ್ಮಾದಲಾಯಿ, ಸುಜಾತಾ ವೇಂಕಟೇಶ್ ರಂಗಂಪೇಟ್, ಜಯಸಿಂಹ ಎಂಟಮನಿ, ಅನಿಲ ಎಂಟಮನಿ, ಸುನಿಲ ಎಂಟಮನಿ, ಆನಂದ, ಶಿವಾ ಉದನುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…