ಬಿಸಿ ಬಿಸಿ ಸುದ್ದಿ

ನೇಕಾರರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ: ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಭರವಸೆ

ನೇಕಾರ ಸಮಾಜ ಎಲ್ಲ ಕ್ಷೇತ್ರದಲ್ಲೂ ಹಿಂದುಳಿದಿದೆ. ಬೇರೆ ರಾಜ್ಯಗಲಲ್ಲಿ ಈ ಸಮಾಜಕ್ಕೆ ಮೀಸಲಾತಿ ನೀಡಲಾಗುತ್ತಿದೆ. ರಾಜ್ಯದಲ್ಲೂ ನೇಕಾರ ಸಮಾಜ ಅಭಿವೃದ್ಧಿಗೆ ಶೇ.2ರಷ್ಟು ಮೀಸಲಾತಿ ಸೌಲಭ್ಯ ನೀಡಬೇಕು. ಅಂದಾಗ ಮಾತ್ರ ನಮ್ಮ ಸಮಾಜಕ್ಕೆ ಅನುಕೂಲವಾಗುತ್ತದೆ. – ವಿನೋದಕುಮಾರ ಜೇನವೇರಿ, ನ್ಯಾಯವಾದಿಗಳು.

ಕಲಬುರಗಿ: ನೇಕಾರರ ಸಾಂಸ್ಕøತಿಕ ಭವನ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಭರವಸೆ ನೀಡಿದರು.

ನಗರದ ಕನ್ನಡ ಭವನದಲ್ಲಿ ಸಪ್ತ ನೇಕಾರ ಮುಖಂಡರ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, ನೇಕಾರ ಸಮುದಾಯ ಅಭಿವೃದ್ಧಿಗೆ ಶ್ರಮಿಸುವೆ. ಸಮಾಜದ ಮುಖಂಡರು ಸಲ್ಲಿಸಿದ ಪ್ರಸ್ತಾವನೆ ಗಮನಿಸಿ ಕೆಕೆಆರ್‍ಡಿಬಿ ಅನುದಾನದಲ್ಲಿ ಅಗತ್ಯ ಹಣÀ ನೀಡುವುದಾಗಿ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಮಾತನಾಡಿ, ರೈತರು ಮತ್ತು ನೇಕಾರರು ಸಮಾಜದ ಎರಡು ಕಣ್ಣು ಇದ್ದಂತೆ ಎಂದು ಭಾವಿಸಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ನೇಕಾರ ಸಮಾಜಕ್ಕೆ ಸಾಕಷ್ಟು ಸೌಲಭ್ಯ ಕಲ್ಪಿಸಿಕೊಟ್ಟಿದ್ದೆ. 524 ನೇಕಾರ ಸಮುದಾಯ ಭವನ ನಿರ್ಮಿಸಿದೆ ಎಂದು ಹೇಳಿದರು.

ಕಲಬುರಗಿಯಲ್ಲಿ ನಡೆಯಲಿರುವ ಒಬಿಸಿ ವಿರಾಟ ಸಮವೇಶದಲ್ಲಿ ನೇಕಾರ ಸಮಾಜ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಮೂಲಕ ನೂರು ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರತಿ ಜಿಲ್ಲಾ ಕೇಂದ್ರದಲ್ಲಿ ನೇಕಾರ ಭವನ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ನಮ್ಮ ಸಮಾಜದ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೇಕಾರ ಸಮಾಜ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಅಡಿ 75 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದರು. ಅದರಲ್ಲಿ ಇನ್ನೂ 45 ಕೋಟಿ ರೂ. ಬಾಕಿ ಉಳಿದಿದೆ. ಈ ಕುರಿತು ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ಶೀಘ್ರ ಹಣ ಬಿಡುಗಡೆಗೆ ಪ್ರಯತ್ನಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಪಡಿಸಿದರು. ನೇಕಾರರ ಸಮಜದ ವಿವಿಧ ಸಂಘಗಳ ಅಧ್ಯಕ್ಷರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದರು.

ಸಪ್ತ ನೇಕಾರ ಪ್ರಮುಖರಾದ ಚನ್ನಮಲ್ಲಪ್ಪ ನಿಂಬೇಣಿ, ರೇವಣಸಿದ್ದಪ್ಪ ಗಡ್ಡದ, ಅಣ್ಣಾರಾಯ ಕುಣಕೇರಿ, ರಂಗಣ್ಣ ಚನ್ನಾ, ರುಕ್ಮೀಣಿ ಸಂಗಾ, ಶ್ಯಾಮಲಾ ಮಂದೇವಾಲಿ, ನ್ಯಾಯವಾದಿ ವಿನೋದ ಜೇನವೇರಿ, ಚಂದ್ರಶೇಖರ ಮ್ಯಾಳಗಿ, ಸತೀಶ ಜಮಖಂಡಿ, ರುದ್ರಪ್ಪ ಗಂಜಿ, ಪ್ರದೀಪ ಸಂಗಾ, ಶ್ರೀನಿವಾಸ ಬಲಪುರ, ಶಿವಲಿಂಗಪ್ಪ ಅಷ್ಟಗಿ, ಸೂರ್ಯಕಾಂತ ಸೊನ್ನದ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago