ಕಲಬುರಗಿ: ಧೂಮಪಾನ, ಮದ್ಯಾಪಾನ, ಜಡಜೀವನ ಶೈಲಿ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಒತ್ತಡದ ಬದುಕು, ಸ್ಥೂಲಕಾಯ, ಹೃದಯಸಂಬಂಧಿ ತೊಂದರೆ ಸೇರಿದಂತೆ ಮುಂತಾದ ಕಾರಣಗಳಿಂದ ಪಾಶ್ರ್ವವಾಯು ಉಂಟಾಗುತ್ತದೆ. ಧೂಮಪಾನ ಮತ್ತು ಆಲ್ಕೋಹಾಲ್ ಸೇವನೆ ಮಾಡದಿರುವುದು, ವ್ಯಾಯಾಮ, ಯೋಗ, ಒತ್ತಡರಹಿತ ಬದುಕು, ಸೂಕ್ತ ವಿಶ್ರಾಂತಿ, ಸದಾ ಚಟುವಟಿಕೆಯಿಂದರಿವುದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ಅದಕ್ಕೆ ಸೂಕ್ತ ಚಿಕಿತ್ಸೆ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಪಾಶ್ರ್ವವಾಯುವಿನಿಂದ ದೂರವಿರಲು ಸಾಧ್ಯವಿದೆ ಎಂದು ಬಸವೇಶ್ವರ ಆಸ್ಪತ್ರೆಯ ತಜ್ಞ ವೈದ್ಯ ಡಾ.ವಿಶ್ವರಾಜ ಬಿ.ತಡಕಲ್ ಹೇಳಿದರು.
ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯಿರುವ ‘ತಡಕಲ್ ಸ್ಪೇಷಾಲಿಟಿ ಕ್ಲಿನಿಕ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿಶ್ವ ಪಾಶ್ರ್ವವಾಯು ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ ಇಳಿಬೀಳುವುದು, ಬದಲಾವಣೆ, ಕೈ-ಕಾಲುಗಳ ಚಲನೆಯಲ್ಲಿ ತೊಂದರೆ, ಮಾತಿನಲ್ಲಿ ತೊದಲುವಿಕೆ, ದೃಷ್ಟಿಯಲ್ಲಿ ತೊಂದರೆ, ಚಲಿಸುವಾಗ ಶ್ರಮವಾಗುವುದು, ವಿಪರಿತ ತಲೆನೋವು ಇವುಗಳು ಪಾಶ್ರ್ವವಾಯುವಿನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ತಜ್ಞ ವೈದ್ಯರನ್ನು ಕಂಡು ತಪಾಸಣೆ ಮಾಡಿಕೊಳ್ಳಬೇಕು. ಇದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಳಗವು ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಪ್ರಮುಖರಾದ ಬಸವರಾಜ ತಡಕಲ್, ಶ್ರೀಗೌರಿ ವಿ.ತಡಕಲ್, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಮಹಾಂತಪ್ಪ ಬದ್ದೋಲಿ, ಚನ್ನಬಸವ ಹುಲಿ ಪಾಟೀಲ, ಬಸವರಾಜ ನಿರ್ಣಾ, ಪ್ರಮೋದ ಕಾಂಬಳೆ, ಅಭಿಶೇಖ ಯಾದಗಿರ, ಅಂಬಾರಾಯ ಬಿರಾದಾರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…