ಬಿಸಿ ಬಿಸಿ ಸುದ್ದಿ

ನವೆಂಬರ್ 11ಕ್ಕೆ ಅಮೃತ-2 ಬೃಹತ್ ಯೋಜನೆಗೆ ಪ್ರಧಾನಮಂತ್ರಿಗಳಿಂದ ಚಾಲನೆ

ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ 9,000 ಕೋಟಿ ರೂ. ವೆಚ್ಚದ ರಾಜ್ಯದಲ್ಲಿನ ಅಮೃತ-2 ಬೃಹತ್ ಕುಡಿಯುವ ನೀರು ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬರುವ ನವೆಂಬರ್ 11ಕ್ಕೆ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ)ಅವರು ಹೇಳಿದರು.

ನ.11ಕ್ಕೆ ರಾಜ್ಯಕ್ಕೆ ಪ್ರಧಾನಿಗಳು ಭೇಟಿ ನೀಡಲಿದ್ದು, ಅಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದರಿಂದ ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ರಾಜ್ಯ ಸಕಾರದ ಸಂಕಲ್ಪಕ್ಕೆ ಕೇಂದ್ರ ಸರ್ಕಾರವು ಬೆನ್ನೆಲುಬಾಗಿ ನಿಂತಿದೆ ಎಂದರು.
ರವಿವಾರ ಕಲಬುರಗಿ ನಗರದ ರಾಜಾಪುರ ರಸ್ತೆಯಲ್ಲಿರುವ (ಕೃμÁ್ಣ ಗ್ರಾಮೀಣ ಬ್ಯಾಂಕ್ ಎದುರುಗಡೆ) ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ 13.86 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ “ಜಲ ಭವನ” ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು.

ಜಲ ಭವನ ಕಟ್ಟಡ ಸುಂದರವಾಗಿ ನಿರ್ಮಿಸಲಾಗಿದೆ. ಬದುಕಿಗೆ ನೀರು ಮತ್ತು ಗಾಳಿ ಅತ್ಯಮೂಲ್ಯ. ಪ್ರತಿಯೊಬ್ಬರಿಗೂ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ಹೀಗಾಗಿ ಅಧಿಕಾರಿ-ಸಿಬ್ಬಂದಿಗಳು ಇದನ್ನರಿತು ಎಲ್ಲಿಯೂ ಲೋಪವಾಗದಂತೆ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಅವರು ಉತ್ತಮವಾಗಿ ಕಾರ್ಯರ್ನಿಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಬೈರತಿ ಬಸವರಾಜ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಕಲಬುರಗಿ ಪಾಲಿಕೆಗೆ 200 ಕೋಟಿ ರೂ. ನೀಡಿದ್ದು, ಇದು ಖರ್ಚು ಮಾಡಿದ ಬಳಿಕ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ, ಕೇಂದ್ರ ಸರ್ಕಾರವು ಅಮೃತ-2 ಯೋಜನೆಯಡಿ ರಾಜ್ಯಕ್ಕೆ 9,000 ಕೋಟಿ ರೂ. ಮಂಜೂರು ಮಾಡಿದೆ. ಇದರಿಂದ ರಾಜ್ಯದ 160 ಪೌರ ಸಂಸ್ಥೆಗಳಿಗೆ (ಶೇ.80ರಷ್ಟು ಪೌರ ಸಂಸ್ಥೆಗಳು) ದಿನದ 24 ಗಂಟೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗಲಿದೆ. ರಾಜ್ಯಕ್ಕೆ ಕೇಂದ್ರಕ್ಕೆ ಸರ್ಕಾರದ ಬಹುದೊಡ್ಡ ಕೊಡುಗೆ ಇದಾಗಿದೆ ಎಂದು ಬಣ್ಣಿಸಿದರು.

ಕಲಬುರಗಿಯನ್ನು ಸ್ಮಾರ್ಟ್ ಸಿಟಿಗೆ ಪರಿಗಣಿಸಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಕಲಬುರಗಿ ನಗರಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ ಈಗ ಪೂರ್ಣವಾಗುವ ಹಂತದಲ್ಲಿದೆ. ಮಹಾನಗರ ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಮಂಜೂರು ಮಾಡಲಾದ 200 ಕೋಟಿ ರೂ. ವೆಚ್ಚದಲ್ಲಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಹಿಂದುಳಿದ ಈ ಪ್ರದೇಶಕ್ಕೆ ಇನ್ನೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಪ್ರದೇಶದ ಬಳ್ಳಾರಿ ಮತ್ತು ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಗೆ ಪರಿಗಣಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಜಲ ಮಂಡಳಿಯ ಕಲಬುರಗಿ ವಲಯದ ಮುಖ್ಯ ಅಭಿಯಂತ ಎಸ್.ರಮೇಶ ಅವರು ಮಾತನಾಡಿ, ಬೀದರ ಮೂಲದ ಮೆ.ಜೆ.ಎಂ.ಕನ್ಸಟ್ರಕ್ಷನ್ಸ್ ಸಂಸ್ಥೆ ನಿರ್ಮಿಸಿರುವ “ಜಲ ಭವನ” ಕಟ್ಟಡವು ಜಿ+2 ಮಾದರಿಯಾಗಿದ್ದು, ಒಟ್ಟು 5,061 ಚದುರ ಮೀಟರ್ ವಿಸ್ತೀರ್ಣ ಹೊಂದಿದೆ. ವಲಯದ 7 ಜಿಲ್ಲೆಗಳ 62 ಸ್ಥಳೀಯ ಸಂಸ್ಥೆಗಳ 65 ಲಕ್ಷ ಜನಸಂಖ್ಯೆಗೆ ನೀರು ಸರಬರಾಜು ಮಾಡುವ ಹೊಣೆ ಮಂಡಳಿ ಹೊತ್ತಿದೆ. 3 ವಿಭಾಗ ಸೇರಿದಂತೆ 13 ಉಪ ವಿಭಾಗಗಳು ಇದರಡಿ ಬರುತ್ತವೆ. ಮುಂದೆ ಮಂಡಳಿಯ ಮುಖ್ಯ ಅಭಿಯಂತರ ಕಚೇರಿ ಹಾಗೂ ಇತರೆ ಉಪ ವಿಭಾಗೀಯ ಕಚೇರಿಗಳು ನೂತನ ಕಟ್ಟಡಕ್ಕೆ ಸ್ಥಳಾಂತರವಾಗಲಿವೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ಪ್ರಭು ಹಾದಿಮನಿ, ಅಯುಕ್ತ ಭುವನೇಶ ಪಾಟೀಲ ದೇವಿದಾಸ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಯಾನಂದ ಪಾಟೀಲ, ಜಲ ಮಂಡಳಿಯ ಕಲಬುರಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಎನ್.ನರಸಿಂಹರೆಡ್ಡಿ, ಸಹಾಯಕ ಕಾರ್ಯಪಾಲಕ ಅಭಿಯಂತ ವಿಜಯಕುಮಾರ ಬಿಲಗುಂದಿ, ಎ.ಇ. ನೀಲೇಶ್ ಸೇರಿದಂತೆ ಮಂಡಳಿಯ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago