ಕಲಬುರಗಿ: ಸಮಾಜಕ್ಕೆ ಸಾಮರಸ್ಯದ ಸಂದೇಶ ಸಾರುವ ನಾಡಿನ ಹಿರಿಯ ಕವಿಗಳ ನುಡಿಗಳನ್ನೊಳಗೊಂಡ ನಾಮಫಲಕಗಳನ್ನು ನಗರದ ಕನ್ನಡ ಭವನದ ಆವರಣದಲ್ಲಿ ಅಳವಡಿಸುವ ಮೂಲಕ ಕನ್ನಡದ ವೈಭವವನ್ನು ಹೆಚ್ಚಿಸಿದಂತಾಗಿದೆ.
ಅನಾವರಣ ಗೊಳಿಸಿದ ರಾಜ್ಯ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ, ನಮ್ಮ ಕನ್ನಡ ನಾಡಿನ ಭಾಷೆ, ಕಲೆ, ಸಂಸ್ಕøತಿ, ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಇನ್ನೂ ಜಾಗೃತರಾಗಬೇಕಿದೆ ಎಂದ ಅವರು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವದ ಬಳಗ ನಗರದಲ್ಲಿನ ಕನ್ನಡ ಭವನದಲ್ಲಿ ಕನ್ನಡದ ಝೇಂಕಾರವನ್ನು ಸದಾ ಕಾಲ ಮೊಳಗಿಸುತ್ತಿದ್ದಾರೆ ಎಂದು ಮನದುಂಬಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ನಮ್ಮ ಪ್ರಾಂಜಲ ಮನಸ್ಸಿನಿಂದ ಕಲಬುರಗಿ ನಾಡಿನಲ್ಲಿ ಕನ್ನಡ ಕಟ್ಟುವ ಕಾಯಕ ನಿರಂತರವಾಗಿ ನಡೆಸುತ್ತಿದ್ದೇವೆ. ಜತೆಗೆ ಕಲ್ಯಾಣ ನಾಡಿನ ಪ್ರತಿಯೊಬ್ಬ ಕನ್ನಡಿಗರಲ್ಲಿನ ಪ್ರತಿಭೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿದ್ದೇವೆ. ಕಲಬುರಗಿ ಜಿಲ್ಲೆ ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿದೆ. ಅನೇಕ ಕವಿ-ಕಲಾವಿದರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದವರಿದ್ದಾರೆ. ಜತೆಗೆ ಇನ್ನೂ ಬೆಳೆಯುವ ಹಂತದಲ್ಲಿನ ಬರಹಗಾರರಿಗೆ ಪ್ರೋತ್ಸಾಹ ನೀಡಿ ಅವರ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಿಕೊಡಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ ಎಂದರು.
ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ, ಜಿಲ್ಲಾ ಕಸಾಪದ ಶಿವರಾಜ ಅಂಡಗಿ, ಶರಣರಾಜ್ ಛಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ, ಶಿಲ್ಪಾ ಜೋಶಿ, ರಾಜೇಂದ್ರ ಮಾಡಬೂಳ, ಶರಣಬಸಪ್ಪ ನರೂಣಿ, ಶರಣಬಸವ ಜಂಗಿನಮಠ, ಬಸವಂತರಾಯ ಕೋಳಕೂರ, ಪ್ರಮುಖರಾದ ಸಿ.ಎಸ್. ಮಾಲಿಪಾಟೀಲ, ಅಜಯಕುಮಾರ, ಶರಣು ಪಾಟೀಲ, ಶಿವಕುಮಾರ ಸಿ.ಎಚ್., ಮಾಲಾ ದಣ್ಣೂರ, ಮಾಲಾ ಕಣ್ಣಿ, ವಿನೋದ ಜೇನವೇರಿ, ಶಿವಶಂಕರ ವರ್ಮಾ, ಮಂಜನಾಥ ಪಾಂಡವಪುರ, ಧರ್ಮಣ್ಣಾ ಹೆಚ್.ಧನ್ನಿ, ಶಿವಲಿಂಗಪ್ಪ ಅಷ್ಠಗಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…