ಬಿಸಿ ಬಿಸಿ ಸುದ್ದಿ

ಮೋದಿ ವಿಜೃಂಭಣೆ | ಸಮುದಾಯದ ಸ್ವಾಮೀಜಿಗಳು, ದೇವೇಗೌಡರು, ಎಸ್ ಎಂ ಕೃಷ್ಣಗೆ ಅಪಮಾನ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಹೆಸರಿನಲ್ಲಿ ಬಿಜೆಪಿಯವರು ಸ್ವಂತ ಕಾರ್ಯಕ್ರಮ ಮಾಡಿಕೊಂಡು, ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಸರಹಳ್ಳಿ ಶಾಸಕ ಮಂಜುನಾಥ್ ರವರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಅಮ್ ಆದ್ಮಿ ಪಕ್ಷದ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಥಯಾತ್ರೆ ಮುಖಾಂತರ ಮಣ್ಣನ್ನು ಶೇಖರಣೆ ಮಾಡುತ್ತಿದ್ದಾರೆ. ಇದು ರಾಜಕೀಯವಾಗಿ ಜನರನ್ನು ಸೆಳೆಯುವ ಕಾರ್ಯಕ್ರಮ ಆಗುತ್ತಿದೆ. ನಮ್ಮ ಸಮಾಜದ ಹಿರಿಯರನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.

ರಥಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿದ್ದಾರೆ. ನಮ್ಮ ಸಮಾಜದ ಸ್ವಾಮೀಜಿಗಳ ಭಾವಚಿತ್ರ ಇಲ್ಲ. ನಮ್ಮ ಸಮುದಾಯ ಹಿರಿಯರಾದ ಹೆಚ್.ಡಿ ದೇವೇಗೌಡರು, ಎಸ್.ಎಂ.ಕೃಷ್ಣ ಅವರ ಭಾವಚಿತ್ರ ಇಲ್ಲ. ಅವರಿಗೆ ಅಗೌರವ ತೋರಿಸುವ ಮೂಲಕ ಬಿಜೆಪಿಯ ಕಾರ್ಯಕ್ರಮ ಮಾಡಿಕೊಂಡು ಹೊರಟ್ಟಿದ್ದಾರೆ. ಹಾಗಾಗಿ, ದಾಸರಹಳ್ಳಿ, ತಿಪಟೂರು, ದೇವನಹಳ್ಳಿ, ಹೊಸಕೋಟೆ ಸೇರಿದಂತೆ ಹಲವು ಕಡೆ ಬಿಜೆಪಿ ರಥಯಾತ್ರೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಣ್ಣತನದ ವಾತಾವರಣ ನಿರ್ಮಾಣ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕಾದ ಕೆಲಸವನ್ನು ಒಂದು ಪಕ್ಷದ ಕೆಲಸ ಮಾಡಿಕೊಂಡಿದಕ್ಕೆ ಜನ ಧಿಕ್ಕರಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಜೆಡಿಎಸ್ ಇದೆ ನನ್ನ ಮೇಲೆ ನಂಬಿಕೆ ಇದೆ. ಎಎಪಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಎರಡು ತಿಂಗಳಿಂದ ಕೆಲಸ ಮಾಡ್ತಾ ಇದ್ದಾರೆ. ಪಕ್ಷದಲ್ಲಿ ಮಹಿಳೆಯರ ಸಂಘಟನೆಗೆ ಸ್ಥಾನಮಾನ ನೀಡಲು ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳ ಜನ ಪರ ಸರ್ಕಾರ ತರುವ ನಿಟ್ಟಿನಲ್ಲಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಮಾದರಿಯಾಗಿ ಶಾಸಕ ಮಂಜುನಾಥ್ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಶಾಸಕರು ಎಲ್ಲ ಕ್ಷೇತ್ರಕ್ಕೂ ಬೇಕಾಗಿದೆ. ನವೆಂಬರ್ 1 ರಂದು ಕನ್ನಡ ಧ್ವಜ ನೀಡುತ್ತಿರುವ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಮ್ಮ ಪಂಚರತ್ನ ಯೋಜನೆ ಇಟ್ಟುಕೊಂಡು ಶಿಕ್ಷಣ, ಉದ್ಯೋಗ, ಸೇರಿದಂತೆ ಕಾರ್ಯಕ್ರಮಗಳನ್ನಯ ರೂಪಿಸಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಡಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆ ಎಂದರು ಕುಮಾರಸ್ವಾಮಿ ಅವರು. ಇತ್ತೀಚೆಗೆ ಇನ್ಸ್‌ಪೆಕ್ಟರ್ ನಂದೀಶ್ ಅವರನ್ನು ಬಾಣಸವಾಡಿಗೆ ವರ್ಗಾವಣೆ ಮಾಡಲು ಪ್ರಯತ್ನ ಮಾಡಿದರು. ಆದರೆ ಕೆಆರ್ ಪುರಂ ಗೆ ವರ್ಗಾವಣೆ ಮಾಡಿಸಿಕೊಂಡರು. ಸಚಿವ ಎಂಟಿಬಿ ನಾಗರಾಜ್ ಅವರು ವಿಡಿಯೋ ಮುಂದೆ ಇಟ್ಟಾಗ ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಬಿದ್ದಾರೆ. ಈಗ ರಸ್ತೆಯಲ್ಲಿ ಬರುವಾಗ ನೋಡಿದೆ, ದಾರಿಯಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿದ್ದರು. ಯಾಕೆ ಈ ಪರಿಸ್ಥಿತಿ ಬರುತ್ತದೆ ನಮಗೆ? ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಮನೆಮನೆಯ ಮೇಲೂ ಕನ್ನಡ ಭಾವುಟ ಹಾರಲಿ: ಈಗಾಗಲೇ ನಾನು ನವೆಂಬರ್ 1 ಕ್ಕೆ ಪ್ರತಿ ಮನೆಯಲ್ಲಿ ಕನ್ನಡ ಧ್ವಜ ಹಾರಿಸಲು ನಾನು ಮನವಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು, ಹಲವಾರು ಸಂಘಟನೆಗಳು ತಮ್ಮ ಮನೆ ಮೇಲೆ ಧ್ವಜ ಹಾರಿಸಲು ತೀರ್ಮಾನಿಸಿದಕ್ಕೆ ನಾನು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಹೆಚ್ ಡಿಕೆ, ನವೆಂಬರ್1 ರಂದು ಪಂಚರತ್ನ ಯಾತ್ರೆಯಂದು ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ನಮ್ಮ ನಾಡಿನಲ್ಲಿ ಭಾಷೆಗೆ ಧಕ್ಕೆ ಬರುವ ರೀತಿಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ನಾವು ಎದುರಿಸಲು ಸಿದ್ದವಾಗಿದ್ದೇವೆ ಎಂದರು.

ದಾಸರಹಳ್ಳಿ ಶಾಸಕ ಮಂಜುನಾಥ್ ಮಾತನಾಡಿ, ಎಲ್ಲಾ ಕಡೆ ಹೋದರೆ ಕುಮಾರಸ್ವಾಮಿ ಅವರು ಮುಂದೆ ಸಿಎಂ ಆಗಬೇಕು ಅಂತಾರೆ. ಬಿಜೆಪಿ ನಾಯಕರ ಬಾಯಲ್ಲೂ ಕುಮಾರಣ್ಣ ಸಿಎಂ ಆಗಬೇಕೆಂದು ಬರುತ್ತಿದೆ. ಬಡವರು,ಆಟೋ, ಚಾಲಕರು, ಕಾರ್ಖಾನೆ ಸಿಬ್ಬಂದಿಗಳು ಸಹ ಹೇಳ್ತಾರೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಿದ್ದಾರೆ. ದೇಶದ ಎಲ್ಲ ಕಡೆ ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ. ರಾಜ್ಯದಲ್ಲಿ, ಬೆಂಗಳೂರಿನಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಪ್ರತಿದಿನ ಬೆಲೆ ಏರಿಕೆ ಆಗುತ್ತಿದೆ. ಕೈಗಾರಿಕೆಗಳು ಮುಚ್ಚಿಕೊಂಡಿವೆ. 60 ವರ್ಷ ದಿಂದ ದೇವೆಗೌಡರು ರಾಜಕೀಯ ಮಾಡುತ್ತಿದ್ದಾರೆ. ಎಲ್ಲೂ ಶಿಕ್ಷಣ ಸಂಸ್ಥೆಗಳನ್ನು ಮಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಅವರು. ರೈತ,ಬಡವರು ಪರ ಕುಮಾರಣ್ಣ ಕೆಲಸ ಮಾಡಿದ್ದಾರೆ. ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂದು ಹೋರಾಟ ಮಾಡ್ತಾ ಇದ್ದಾರೆ ಎಂದರು.

ಸಂಪೂರ್ಣ ಬಹುಮತ ಬಂದು ಅವರು ಕೆಲಸ ಮಾಡಬೇಕು. ಸಮ್ಮಿಶ್ರ ಸರ್ಕಾರಗಳಲ್ಲಿ ಕೆಲಸ ಮಾಡೋಕೆ ಆಗಲ್ಲ. ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗಲ್ಲ. ಹಾಗಾಗಿ ಸಂಪೂರ್ಣ ಬಹುಮತದ ಸರ್ಕಾರ ಅಧಿಕಾರಕ್ಕೆ ಬರಬೇಕು. ನೂರಕ್ಕೆ ನೂರರಷ್ಟು ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗ್ತಾರೆ. ಸ್ವಯಂಪ್ರೇರಿತವಾಗಿ ಕಾಂಗ್ರೆಸ್, ಬಿಜೆಪಿಯಿಂದ ಸೇರ್ಪಡೆ ಆಗ್ತಾರೆ. ನಾವು ಹೈಕಮಾಂಡ್ ಗೆ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ತೋಟದಲ್ಲಿ ಅಥವಾ ಜೆಪಿ ನಗರಕ್ಕೆ ಹೋದ್ರೆ ಕುಮಾರಣ್ಣ ಕರೆದು ಮಾತನಾಡುತ್ತಾರೆ ಎಂದು ಹೇಳಿದರು.

ಇದಕ್ಕೂ ಮುನ್ನ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿ ಮನೆ ಮೇಲೆ ಬಾವುಟ ಹಾರಿಸಲು ಕರೆ ನೀಡಿದ ಹೆಚ್ ಡಿಕೆ, ದಾಸರಹಳ್ಳಿಯಲ್ಲಿ ಕನ್ನಡದ ಬಾವುಟ ವಿತರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸ್ವಇಚ್ಛೆಯಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಎಎಪಿ ಹಾಗೂ ಇತರೆ ಪಕ್ಷದ‌ ಮುಖಂಡರು ಜೆಡಿಎಸ್ ಸೇರ್ಪಡೆ ಆಗುತ್ತಿದ್ದು, ಅವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವುದಾಗಿ ಕುಮಾರಸ್ವಾಮಿ ಹೇಳಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago