ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವೇಶ್ವರರ ಹೆಸರನ್ನು ಇಡಲು ವಿರೋಧಿಸಿದ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವವರೆಗೂ ವೀರಶೈವ ಲಿಂಗಾಯತರು ನಿದ್ರೆ ಮಾಡಬೇಡಿ ಎಂದು ಶಾಸಕ ಬಸವನ್ನಗೌಡ ಪಾಟೀಲ್ ಯತ್ನಾಳ ಹೇಳಿದ್ದರು.
ಅವರು ಕಲಬುರಗಿ ನಗರದ ಎನ್.ವಿ ಮೈದಾನದಲ್ಲಿ ವೀರಶೈವ ಲಿಂಗಾಯತರು ಸಮಾವೇಶದಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವರು ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನರಿಬೋಳಿ ಮಾತನಾಡಿ ಖರ್ಗೆ ಕೋಟೆ ಛಿದ್ರಗೊಳಿಸಿ ಡಾ. ಜಾಧವ್ ಗೆದ್ದರೆ ನರೇಂದ್ರ ಮೋದಿ ಮತ್ತೆ ಪ್ರಧಾನಿ, ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದ್ದರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ ವೀರಶೈವ ಲಿಂಗಾಯತರು ತ್ಯಾಗದ ಪ್ರತೀಕ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿಸಲು ಡಾ. ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತ್ಯಾಗ ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದು ನಮ್ಮೆಲ್ಕರ ಜವಾಬ್ದಾರಿ ಎಂದರು.
ನಂತರ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಮಾತನಾಡಿ, ಬಂಜಾರಾ ಸಮಾಜದ ಅಭಿವೃದ್ಧಿಗೊಳಿಸಿದ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಹಾಗೂ ನರೇಂದ್ರ ಮೋದಿ ಅವರನ್ನು ಇನ್ನೊಮ್ನೆ ಪ್ರಧಾನಿಯಾಗಿಸಲು ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ. ಲೋಕಸಭಾ ಚುನಾವಣೆಯಲ್ಲಿ ನನಗೆ ಗೆಲ್ಲಿಸುವ ಮೂಲಕ ಗೌಡರು ನನಗೆ ನ್ಯಾಯ ಕೊಡಿ ಎಂದರು.
ಬಿ.ಎಸ್ ಯಡಿಯೂರಪ್ಪಅವರು ಸಮಾವೇಶದ ಅಧ್ಯಕ್ಷ ವಹಿಸಿದ್ದರು. ವೇದಿಕೆಯ ಮೇಲೆ ಮಾಲಿಕಯ್ಯ ಗುತ್ತೇದಾರ, , ಶಾಸಕ ರಾಜೂಗೌಡ, ಶಾಸಕ ಬಸವರಾಜ ಮತ್ತಿಮಡು, ಬಿ.ಜಿ. ಪಾಟೀಲ, ರಾಜಕುಮಾರ ಪಾಟೀಲ ತೆಲ್ಕೂರ, ಪಕ್ಷದ ಮುಖಂಡರು ಸೇರಿ ಮುಂತಾದವರು ಇದ್ದರು.