ಬಿಸಿ ಬಿಸಿ ಸುದ್ದಿ

ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆಯಲ್ಲಿ ದೇವೇಗೌಡರ ಉಪಸ್ಥಿತಿ

ಬೆಂಗಳೂರು: ಇಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು ಅವರು.

ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಮಾತು ಕೊಟ್ಟ ಹಾಗೆ ಎಲ್ಲ ಕೆಲಸಗಳನ್ನು ಮಾಡಿದರು. ಸಾಲಮನ್ನಾ ಮಾಡಿ ಮಾತು ಉಳಿಸಿಕೊಂಡರು. ಹೀಗಾಗಿ ನನ್ನ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಮತ್ತೊಮ್ಮೆ ಈ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪಕ್ಷ ಗೆಲ್ಲಲು ಸಾಧ್ಯವಾದ ಎಲ್ಲ ಕೆಲಸವನ್ನು ಮಾಡುತ್ತೇನೆ. ಮುಖಂಡರು, ಕಾರ್ಯಕರ್ತರು ಎಲ್ಲರೂ ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದ ಪಕ್ಷಕ್ಕೆ ದುಡಿಯಬೇಕು. ನಿಸ್ವಾರ್ಥವಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ, ಅವರು ಕನಸು ಕಾಣುತ್ತಿರುವ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೆ ತರುತ್ತಾರೆ. ಇಡಿ ರಾಜ್ಯದ ಅಭಿವೃದ್ಧಿಗೆ ಪಂಚರತ್ನ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಮಾಜಿ ಪ್ರಧಾನಮಂತ್ರಿಗಳು ನುಡಿದರು.

ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು ಎಂದು ಮಾಜಿ ಪ್ರಧಾನಿಗಳು ಪುನರುಚ್ಚರಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದು ನೋಡಿ ನನಗೆ ಸಂತೋಷ ಆಗಿದೆ. ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

32 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

33 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

36 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago