ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದಲ್ಲಿ ಸರಕಾರದಿಂದ ಸರದಾರ ಪಟೇಲ ಜಯಂತಿ ಆಚರಿಸಲು ಒತ್ತಾಯ

ಕಲಬುರಗಿ : ದೇಶದ ಮೊದಲ ಉಪ ಪ್ರಧಾನಿ ಮತ್ತು ಗೃಹ ಮಂತ್ರಿಗಳಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮ ದಿನದ ಅಂಗವಾಗಿ ಇಂದು ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲರ ವೃತ್ತದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ವತಿಯಿಂದ ನಿಯೋಜಿಸಲಾದ ಈ ಜನ್ಮ ದಿನದ ಕಾರ್ಯಕ್ರಮದ ಸಂದರ್ಭದಲ್ಲಿ ಉದ್ದೆಶಿಸಿ ಮಾತನಾಡಿದ ಶಾಸಕರು ಮತ್ತು ಸಮಿತಿ ಅಧ್ಯಕ್ಷ ಶಶೀಲ್ ನಮೋಶಿ ಅವರು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಈ ಸಾಲಿನ ಸಂದರ್ಭದಲ್ಲಿ ಪಟೇಲ್ ವೃತ್ತದ ಸೌಂದರ್ಯಿಕರಣ ಮತ್ತು ಪ್ರತಿಮೆಯ ಆಧುನಿಕರಣ ಕಾರ್ಯ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಿ ತಿಳಿಸಿದ ಅವರು ಪಟೇಲ್ ಜಯಂತಿಯ ಎಲ್ಲರಿಗೂ ಶುಭಾಶಯಗಳು ತಿಳಿಸಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ದಸ್ತಿ ಅವರು ಮಾತನಾಡಿ ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಡಿದ ಹೋರಾಟಗಾರರ ತ್ಯಾಗ ಬಲಿದಾನ ಮರೆಯುವಂತಿಲ್ಲ.ನಮ್ಮ ಹೋರಾಟಗಾರರ ಉಗ್ರ ಸ್ವರೂಪದ ಹೋರಾಟ ಭಾರತ ಸರ್ಕಾರದ ಕಣ್ಣು ತೆರೆಸಿತು.ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಗಿನ ಗೃಹ ಮಂತ್ರಿ ಪಟೇಲರು ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಮಾರ್ಗದರ್ಶನದಂತೆ ಸರ್ದಾರ್ ಪಟೇಲ್ ಅವರು ದಿಟ್ಟನದ ನಿಲುವು ತೆಗೆದುಕೊಂಡು ಹೈದರಾಬಾದ್ ಸಂಸ್ಥಾನದ ಮೇಲೆ ಪೊಲೀಸ್ ಕಾರ್ಯಾಚರಣೆ ನಡೆಸಿದರು.ಇದರ ಫಲ ಸ್ವರೂಪ ಹೈದ್ರಾಬಾದ ನಿಜಾಮ ರಾಜ್ಯ ಅಖಂಡ ಭಾರತದಲ್ಲಿ 17 ನೇ ಸೆಪ್ಟೆಂಬರ್ 1948ರಲ್ಲಿ ವಿಲೀನವಾಯಿತು.ಸರದಾರ ಪಟೇಲರ ಐತಿಹಾಸಿಕ ಕಾರ್ಯ ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ.ಇನ್ನು ಮುಂದೆ ಸರಕಾರ ಪಟೇಲರ ಜಯಂತಿ ಅಧಿಕೃತವಾಗಿ ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಚರಣೆ ಮಾಡಲು ಸರ್ಕಾರಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಮಾರುತಿ ಪವಾರ,ಮಚ್ಚಿಂದ್ರನಾಥ ಮೂಲಗೆ, ಲಿಂಗರಾಜ ಸಿರಗಾಪೂರ, ಡಾ.ಎ.ಎಸ್.ಭದ್ರಶೆಟ್ಟಿ, ಕಲ್ಯಾಣರಾವ ಪಾಟೀಲ್, ಗಿರೀಶಗೌಡ ಧುಮ್ಮದ್ರಿ, ಅಬ್ದುಲ್ ರಹೀಂ, ಸುರೇಶ್ ಬಡಿಗೇರ, ಬಸವರಾಜ ಚಿಟಗುಂಪಿ, ರಾಜು ಜೈನ, ಅಮಿತಕುಮಾರ, ಪರಮೇಶ್ವರ್, ಸಿದ್ದು ಮಡಿವಾಳ, ವಿಶ್ವನಾಥ ಗೌನಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago