ಶಹಾಬಾದ್: ಎ.ಐ.ಯು.ಟಿ.ಯು.ಸಿ ಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದ ಶಹಾಬಾದಿನಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶ ಜರುಗಿತು.
ಈ ವೇಳೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ ಮಾತನಾಡಿ ಶಹಾಬಾದಿನಲ್ಲಿರುವ ಸಾವಿರಾರು ಕಟ್ಟಡ ಕಾರ್ಮಿಕರು ಸಂಘಟಿತರಾಗಿ ಸರಕಾರದಿಂದ ತಮ್ಮ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಕಾರ್ಮಿಕ ಇಲಾಖೆಯಿಂದ ಹಲವಾರು ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ನೈಜ ಕಾರ್ಮಿಕರು ದೂರ ಉಳಿಯುತ್ತಿದ್ದಾರೆ. ರಾಜ್ಯ ಸರಕಾರ ಕಟ್ಟಡ ಕಾರ್ಮಿಕರ ನಿಧಿಯಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದು ಕಷ್ಟ ಪಟ್ಟು ದುಡಿಯುವ ಕಟ್ಟಡ ಕಾರ್ಮಿಕರಿಗೆ ಅನುಕೂಲಕರವಾಗಬೇಕಾಗಿದೆ. ಇಂದು ನಾವು ನೋಡುತ್ತಿರುವ ಹಲವಾರು ಸಮಸ್ಯೆಗಳನ್ನು ಸಂಘಟಿತರಾಗಿ ಹೋರಾಡಬೇಕಾಗಿದೆ ಎಂದು ನುಡಿದರು.
ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎ.ಐ.ಯು.ಟಿ.ಯು.ಸಿ ನ ಸ್ಥಳೀಯ ಸಂಚಾಲಕರಾದ ರಾಘವೇಂದ್ರ ಎಂ.ಜಿ. ರವರು ಮಾತನಾಡುತ್ತಾ, ಶಹಾಬಾದ ಹಾಗೂ ಸುತ್ತ ಹಳ್ಳಿಗಳಿಂದ ಸಾವಿರಾರು ಕಟ್ಟಡ ಕಾರ್ಮಿಕರು ದಿನಾಲೂ ಕಲಬುರಗಿಗೆ ಹೋಗಿ ದುಡಿದು ಬರುತ್ತಿದ್ದಾರೆ, ಅದರಲ್ಲಿ ಬಹುಸಂಖ್ಯಾತರು ಮಹಿಳೆಯರು ಕಷ್ಟ ಪಟ್ಟು ದುಡಿಯುತ್ತಿದ್ದಾರೆ. ಸರಕಾರದ ಸೌಲಭ್ಯಗಳು ಅವರಿಗೆ ಸಿಗುವಂತೆ ಸಂಘಟನೆಯು ಕಾರ್ಯ ರೂಪಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಕಟ್ಟಡ ಕಾರ್ಮಿಕ ಸಂಘದ ಸಂಚಾಲಕರಾದ ತಿಮ್ಮಯ್ಯ ಬಿ. ಮಾನೆ ರವರು ನಡೆಸಿಕೊಟ್ಟರು. ನಂತರ ಕಟ್ಟಡ ಕಾರ್ಮಿರ ಶಹಾಬಾದ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ತಿಮ್ಮಯ್ಯ ಬಿ. ಮಾನೆ, ಸದಸ್ಯರಾಗಿ, ಲಕ್ಷ್ಮಣ ದೇವಕರ, ಸುರೇಶ, ಹಣಮಂತ ಡಿ., ನಾಗರಾಜ, ರಾಮು, ಲಕ್ಷ್ಮಣ ದೇವದುರ್ಗಕರ್, ಕಾಳಿಂಗ, ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…