ಶಹಾಬಾದ: ಸ್ವತಂತ್ರ ನಂತರ ಸುಮಾರು ಆರುನೂರು ಸಂಸ್ಥಾನಗಳನ್ನು ಒಗ್ಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಸರ್ದಾರ್ ವಲ್ಲಭಾಯಿ ಪಟೇಲರ ಮೂರ್ತಿ ಅನಾವರಣ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಮಹಾಪುರುಷನ ವ್ಯಕ್ತಿತ್ವವನ್ನು ಎತ್ತಿ ತೋರಿಸಿದ್ದಾರೆ ಎಂದು ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯ ಮುಖ್ಯಗುರು ಬಾಬಾಸಾಹೇಬ ಸಾಳುಂಕೆ ಹೇಳಿದರು.
ಅವರು ಸೋಮವಾರ ನಗರದ ಎಸ್.ಜಿ. ವರ್ಮಾ ಹಿಂದಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಏಕತಾ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಅವರ ಹೆಸರು ಭಾರತದ ಇತಿಹಾಸದಲ್ಲಿ ಎಂದೆಂದೂ ಅಮರ. ತಮ್ಮ ಜೀವನವನ್ನು ದೇಶಕ್ಕೆ ಸಮರ್ಪಿಸಿದ ಪಟೇಲರ್ ಕೊಡುಗೆಯನ್ನು ಎಂದಿಗೂ ಮರೆಯುವುದಿಲ್ಲ. ದೇಶವನ್ನು ಒಗ್ಗೂಡಿಸುವಲ್ಲಿ ಅವರ ಸೇವೆಯನ್ನು ಸ್ಮರಿಸಿಕೊಂಡು ಇಡೀ ವಿಶ್ವದಲ್ಲಿಯೇ ಅತಿ ಎತ್ತರವಾದ ಅವರ ಮೂರ್ತಿ ಗುಜರಾತನಲ್ಲಿ ಅನಾವರಣಗೊಂಡಿರುವುದು ಭಾರತದ ಗೌರವ ಹೆಚ್ಚಿಸಿದಂತಾಗಿದೆ ಎಂದು ಹೇಳಿದರು.
ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರು ಸುಧೀರ ಕುಲಕರ್ಣಿ ಮಾತನಾಡಿ, ಹರಿದು ಹೋದ ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಿಸುವಲ್ಲಿ ಪಟೇಲರ ಪಾತ್ರ ಹಿರಿದು ಎಂದು ಬಣ್ಣಿಸಿದರು.
ಬಡ ರೈತ ಕುಟುಂಬದಲ್ಲಿ ಹುಟ್ಟಿದರೂ ತಮ್ಮ ನಿಸ್ವಾರ್ಥ ಸೇವೆಯಿಂದಾಗಿ ದೇಶವೇ ಸ್ಮರಿಸುವಂಥ ಕೆಲಸ ಮಾಡಿದ್ದಾರೆ.ಆದ್ದರಿಂದ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳುವತ್ತ ಸಾಗಬೇಕಿದೆ ಎಂದರು.
ಶಿಕ್ಷಕರಾದ ರಮೇಶ ಜೋಗದನಕರ್, ಗೀತಾ ಸಿಪ್ಪಿ, ಸುರೇಖಾ ಜಾಯಿ, ಸುಕನ್ಯಾ, ಚನ್ನಬಸಪ್ಪ ಕೊಲ್ಲೂರ್, ರಮೇಶ ಮಹೇಂದ್ರಕರ್, ಸೂಗಯ್ಯ ಘಂಟಿಮಠ, ಗೀತಾ, ಮಲ್ಲಿನಾಥ ಪಾಟೀಲ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…