ಕನ್ನಡದಲ್ಲಿ SSC ಪರೀಕ್ಷೆ ನಡೆಸಲು | ಕಲ್ಯಾಣ ಕರ್ನಾಟಕಕ್ಕೆ ನ್ಯಾಯಕ್ಕೆ ಒತ್ತಾಯಿಸಿ ಪ್ರಧಾನಿಗೆ ಮನವಿ

ಕಲಬುರಗಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ನಡೆಸಲಾಗುವ ವಿವಿಧ ಹುದ್ದೆಗಳ ಪರೀಕ್ಷೆಗಳು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಿಗೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ, ಪ್ರಾದೇಶಿಕ ಭಾಷೆಗಳಿಗೆ ಅನುಮತಿ ಕೊಡುವಂತೆ ಒತ್ತಾಯಿಸಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಷನ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ವಿವಿಧ ಹುದ್ದೆಗಳಾದ ಗಡಿ ಭದ್ರತಾ ಪಡೆ (ಬಿ.ಎಸ್.ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್), ಕೇಂದ್ರೀಯ ಮೀಸಲು ಪೋಲಿಸ್ ಪಡೆ (ಸಿ.ಆರ್.ಪಿ.ಎಫ್) ಮುಂತಾದ ಹುದ್ದೆಗಳ ಆಯ್ಕೆಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗೆ ಸೀಮಿತಗೊಳಿಸಿರುವುದನ್ನು ಖಂಡನೀಯವಾಗಿದ್ದು, ಹಿಂದಿಯೇತರ ದಕ್ಷಿಣದ ರಾಜ್ಯಗಳನ್ನು ಕಡೆಗಣಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡದಲ್ಲಿ ಅಧ್ಯಾಯನ ಮಾಡಿ ಶಿಕ್ಷಣ ಪೂರೈಸಿ ನಮ್ಮ ಮಾತೃಭಾಷೆಯಲ್ಲೇ ಜ್ಞಾನಗಳಿಸಿಕೊಂಡಿರುತ್ತಾರೆ. ಆದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳು ಹಿಂದಿ ಹಾಗೂ ಇಂಗ್ಲೀಷ್ ನಲ್ಲಿ ನಡೆಸಿದರೆ, ನಮ್ಮ ರಾಜ್ಯದ ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರಕಾರ ಕೇವಲ ಹಿಂದಿ ಮಾತನಾಡುವ ರಾಜ್ಯಗಳಿಗೆ ಆದ್ಯತೆಯನ್ನು ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಸುತ್ತಿದೆ. ಕೇಂದ್ರ ಸರಕಾರ ಇಂತಹ ಪ್ರಾದೇಶಿಕ ತಾರತಮ್ಯ ನೀತಿಯನ್ನು ಕೈಬಿಟ್ಟು, ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ವಿವಿಧ ಹುದ್ದೆಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಕನ್ನಡ ಭಾಷೆಯಲ್ಲೂ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ವಿಷಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮಲತಾಯಿ ಧೋರಣೆ ಮುಂದುವರಿಸುತ್ತಿದೆ. ಕಲಬುರಗಿ ಜಿಲ್ಲೆಗೆ ಹಲವಾರು ಯೋಜನೆಗಳು ಬಂದು ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಈ ಭಾಗದಲ್ಲಿ ಹಲವಾರು ಇಲಾಖೆಗಳಲ್ಲಿ ಖಾಲಿ ಹುದ್ದೆಗಳಿವೆ. ಆ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಿಕೊಳ್ಳುವ ಮೂಲಕ ಈ ಭಾಗದ ಯುವಕರಿಗೆ ಉದ್ಯೋಗ ನೀಡಬೇಕು ಎಂದು ಪ್ರಧಾನ ಮಂತ್ರಿಗಳಿಗೆ ಆಗ್ರಹಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದ್ದು ಸ್ಥಳೀಯರಿಗೆಗೆ ಸಚಿವ ಸ್ಥಾನವು ನೀಡಿಲ್ಲ. ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಜಿಲ್ಲೆಯಿಂದ ಒಬ್ಬರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನೊಬ್ಬರು ಈ ಜಿಲ್ಲೆಯವರೆ ಎಂದು ಗುರುತಿಸಿದ್ದಾರೆ. ಆದರೆ ಅವರು ಬೆಳಗಾವಿ ಜಿಲ್ಲೆಯವರು. ಹಿಂದೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳುವ ಸಂದರ್ಭದಲ್ಲಿ 5 ಜನ ಬೇರೆ-ಬೇರೆ ಕ್ಷೇತ್ರದಲ್ಲಿ ಸೇವೆಗೈಯುತ್ತಿರುವವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಈ ವರ್ಷ ಕೇವಲ ಒಬ್ಬರನ್ನೆ ಆಯ್ಕೆ ಮಾಡಿಕೊಂಡಿರುವುದು ವಿಷಾದಕರ ಸಂಗತಿ.

ಇನ್ನು ಮುಂದಾದರು ಸರಕಾರ ಈ ಭಾಗಕ್ಕೆ ನಿರ್ಲಕ್ಷ್ಯ ವಹಿಸದೆ, ಜನರ ತಾಳ್ಮೆ ಪರೀಕ್ಷಿಸದೆ ಈ ಭಾಗಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಅಖಿಲ ಭಾರತ ಯುವಜನ ಫೆಡರೇಷನ್ ಕಲಬುರಗಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಹಣಮಂತರಾಯ ಅಟ್ಟೂರ ಅವರು ಜಿಲ್ಲಾಧಿಕಾರಿಯವರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ವಸಂತ ಮಂಗಲಗಿ, ಮಹಬೂಬ ಸರಡಗಿ, ರಮೇಶ ಕೋರಿಶೆಟ್ಟಿ, ರಾಜು ಹೆಬ್ಬಾಳ, ಶ್ರವಣಕುಮಾರ್ ಮಠ, ನಾರಯಣ ಜೋಶಿ, ಚನವಿರ್ ಮಠ, ಸಂಗಮೇಸ್ ನಾಗೂರ್, ಸಂಜೂವ್ ಕುಮಾರ್ ಬಾಬಾನಗೋಳ್, ಶರಣ  ಬಾಬಾನಗೋಳ್ ಸೇರಿದಂತೆ ಹಲವರು ಈ ಸಂದರ್ಬದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420